Tuesday, November 18, 2025

Latest Posts

ಮುಡಾ ಕೇಸ್: ಆರೋಪಿಗಳ ಎದೆಯಲ್ಲಿ ಢವ ಢವ..! ಮತ್ತೆ ಎದುರಾಗುತ್ತಾ ಸಿದ್ದರಾಮಯ್ಯ ಅವರಿಗೆ ಸಂಕಷ್ಟ..?

- Advertisement -

Political News: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಅವರಿಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ. ಅಲ್ಲದೆ ಈ ಪ್ರಕರಣದಲ್ಲಿನ ಇತರ ಆರೋಪಿಗಳ ವಿರುದ್ಧ ತನಿಖೆ ಮುಂದುವರೆಸಲು ಅನುಮತಿ ನೀಡಿದೆ. ಇದರ ಪರಿಣಾಮ ಸಿಎಂ ಮತ್ತೆ ಸಂಕಷ್ಟ ಎದುರಾಗುವ ಸನ್ನಿವೇಶ ಬಂದೊದಗಿದೆ.

ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ನಿರ್ಬಂಧ ಹೇರಲಾಗದು..

ಇನ್ನೂ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಇಡಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗಿಸಿ ನ್ಯಾಯಪೀಠ ವಿಲೇವಾರಿ ಮಾಡಿದೆ. ಅಲ್ಲದೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬೇಕೆಂಬ ಮನವಿಯನ್ನು ಪುರಸ್ಕರಿಸಲಾದು. ಹಾಗಂತ ಇದೇ ವೇಳೆ ಪ್ರಕರಣದಲ್ಲಿನ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ನಿರ್ಬಂಧ ಹೇರಲಾಗದು. ಅಲ್ಲದೆ ನಟೇಶ್ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದ ಬಳಿಕ ವಶಕ್ಕೆ ಪಡೆದ ದಾಖಲೆಯ ಜೊತೆ ಅವರ ಹೇಳಿಕೆಯನ್ನು ತನಿಖೆಗೆ ಪರಿಗಣಿಸಬಹುದು ಎಂದು ನ್ಯಾಯಪೀಠ ಹೇಳಿದೆ.

2020ರ ಪಿಎಂಎಲ್ ಅಡಿಯಲ್ಲಿ ತನಿಖೆಗೆ ಅವಕಾಶ..

ಅಂದಹಾಗೆ ಪ್ರಶ್ನೆ ಮಾಡಲಾಗಿರುವ ಏಕಸದಸ್ಯ ಪೀಠದ ಆದೇಶಕ್ಕೆ ಹೊರತಾಗಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2020ರ ಅಡಿಯಲ್ಲಿ ತನಿಖೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಇಡಿಯು ಕಾನೂನು ಪ್ರಕಾರ ತನಿಖೆ ನಡೆಸಲು ಅರ್ಹತೆ ಪಡೆದಿದೆ. ಈ ನೆಲೆಯಲ್ಲಿ ಮಧ್ಯಂತರ ಅರ್ಜಿಯನ್ನು ವಿಲೇವಾರಿ ಮಾಡುವ ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ನಟೇಶ್ ಪಾತ್ರ ಏನು..?

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ 14 ಬದಲಿ ನಿವೇಶನ ಹಂಚಿಕೆ ಮಾಡಿದ್ದ ವೇಳೆ ಈ ನಟೇಶ್ ಮುಡಾದ ಆಯುಕ್ತರಾಗಿದ್ದರು.

ರಾಜಕೀಯವಾಗಿ ತೀವ್ರ ಜಟಾಪಟಿಗೆ ಕಾರಣವಾಗಿದ್ದ ಮುಡಾ ಹಗರಣದ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಕಳೆದ ತಿಂಗಳು ವಜಾಗೊಳಿಸಿತ್ತು.

- Advertisement -

Latest Posts

Don't Miss