- Advertisement -
Mandya News: ಮೈಶುಗರ್ ಸಕ್ಕರೆ ಕಾರ್ಖಾನೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಂಗಲ್ ದಾಸ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮಂಗಲ್ ದಾಸ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಲ್ ದಾಸ್ ಅವರು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದವರು. ಇಂದು ಮೈಶುಗರ್ ಎಂ.ಡಿಯಾಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಇದುವರೆಗೂ ಕೆ.ಎ.ಎಸ್ ಅಧಿಕಾರಿ ಬಿ.ಎಮ್.ವೀಣಾ ಅವರು ಪ್ರಭಾರ ಎಂ.ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
- Advertisement -