Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ”ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ ಕ್ರಮಕ್ಕೆ ಆಗ್ರಹಿಸಿ, ಪ್ರತಿಭ”ನೆ ನಡೆಸಿದ್ದಾರೆ. ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಧಾರವಾಡದ ಜಿಲ್ಲಾ ಕಚೇರಿ ಎದುರು ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ನೇತೃತ್ವದಲ್ಲಿ ಮೌನ ಪ್ರತಿಭಟನೆಯೂ ನಡೆದಿದೆ. ಕಾಶ್ಮಿರ ನಲ್ಲಿ ಪ್ರವಾಸಿಗರ ಮೆಲೆ ಗುಂಡಿನ ದಾಳಿ ಖಂಡಿಸಿ ಪ್ರತಿಭಟನೆ ಖಂಡಿಸಿ, ಮೌನ ಪ್ರತಿಭಟನೆ ನಡೆಸಲಾಗಿದೆ. ಉಗ್ರವಾದಿಗಳನ್ನ ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ಕೊಡಬೇಕು. ಪ್ರವಾಸಿ ತಾಣಗಳಲ್ಲಿ ಇಂತಹ ಘಟನೆಗಳು ಮತ್ತೆ ಮರಕಳಿಸದಂತೆ ನೋಡಿಕ್ಕೊಳ್ಳಬೇಕು.
ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದು, ಪ್ರತಿಬಟನೆಯಲ್ಲಿ ನೂರಾರು ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು.