Saturday, July 5, 2025

Latest Posts

ಭಾರತದ ಎದುರು ಶರಣಾದ ಪಾಕ್‌ : ಬಿಎಸ್‌ಎಫ್‌ ಯೋಧನ ರಿಲೀಸ್‌..!

- Advertisement -

ಆಪರೇಷನ್‌ ಸಿಂಧೂರ್‌ ವಿಶೇಷ :

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪಾಕ್‌ ವಿರುದ್ಧ ಪ್ರತೀಕಾರಕ್ಕೆ ಕೂಗು ಹೆಚ್ಚಾಗಿತ್ತು, ಈ ವೇಳೆ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿ ಬಂಧಿತರಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾ ಅವರನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈ ಮೂಲಕ ಆಪರೇಷನ್‌ ಸಿಂಧೂರ್‌ ಬಳಿಕ ಭಾರತಕ್ಕೆ ಇನ್ನೊಂದು ರಾಜತಾಂತ್ರಿಕ ಗೆಲುವಾಗಿದೆ.

ತಾಯ್ನಾಡಿಗೆ ಮರಳಿದ ಪೂರ್ಣಮ್‌ ಕುಮಾರ್‌ ಶಾ..!

ಇನ್ನೂ ಈ ಕುರಿತು ಅಧಿಕೃತವಾಗಿ ತಿಳಿಸಿರುವ ಬಿಎಸ್‌ಎಫ್‌, ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ ಮೂಲಕ ಬೆಳಿಗ್ಗೆ 10.30 ರ ಸುಮಾರಿಗೆ ಹಸ್ತಾಂತರಿಸಲಾಗಿದೆ. ಕಳೆದ ಏಪ್ರಿಲ್ 23, 2025 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಜವಾನ್ ಪಿಕೆ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ಬುಧವಾರ ಮಾಹಿತಿ ನೀಡಿದೆ.

ಆಕಸ್ಮಿಕವಾಗಿ ಗಡಿ ನಿಯಂತ್ರಣ ರೇಖೆ ದಾಟಿದ್ದ ಯೋಧ..

ಅಲ್ಲದೆ ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನಲ್ಲಿ ಆಕಸ್ಮಿಕವಾಗಿ ಎಲ್ಒಸಿಯ ಗಡಿ ನಿಯಂತ್ರಣ ರೇಖೆಯನ್ನು ದಾಟಿದ ನಂತರ ಏಪ್ರಿಲ್ 23 ರಂದು ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು. ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರು ಸಾವನ್ನಪ್ಪಿದ ವಿನಾಶಕಾರಿ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಅವರನ್ನು ವಶಕ್ಕೆ ಪಡೆಯಲಾಗಿತ್ತು.

ಆದರೆ ಆರಂಭದಲ್ಲಿ ಅವರನ್ನು ಬಿಡುಗಡೆಗೆ ಭಾರತವು ಪಾಕಿಸ್ತಾನಕ್ಕೆ ಒತ್ತಾಯಿಸಿತ್ತು. ಆದರೆ ಪಾಕಿಸ್ತಾನ ತನ್ನ ಮೊಂಡುತನ ಮುಂದುವರೆಸಿತ್ತು. ಯಾವಾಗ ಭಾರತ ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಡೆಸಿದ ಬಳಿಕ ಇದೀಗ ಭಾರತದ ಎದುರು ಮಂಡಿಯೂರಿರುವ ಪಾಕಿಸ್ತಾನ ಹೆದರಿ ಬಿಲ ಸೇರಿಕೊಂಡಿದ್ದು, ಇನ್ನೂ ಭಾರತದ ತಂಟೆಗೆ ಹೋದರೆ ನಮಗೆ ಉಳಿಗಾಲವಿಲ್ಲ ಎಂದು ತಿಳಿದಿರುವ ಪಾಕಿಸ್ತಾನ ನಮ್ಮ ಬಿಎಸ್‌ಎಫ್‌ ಯೋಧನನ್ನು ಬಿಡುಗಡೆಗೊಳಿಸಿದೆ.

ಇನ್ನೂ ಪೂರ್ಣಮ್‌ ಕುಮಾರ್‌ ಶಾ ಅವರ ಪತ್ನಿ ರಜನಿ ಶಾ ಅವರು ಇದಕ್ಕೂ ತನ್ನ ಗಂಡನನ್ನು ಬಿಡುಗಡೆಗೊಳಿಸುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದ್ದರು. ಅಲ್ಲದೆ ಬಿಎಸ್‌ಎಫ್‌ನ ಪಶ್ಚಿಮ ಕಮಾಂಡ್‌ನ ಹಿರಿಯ ಅಧಿಕಾರಿಗಳೊಂದಿಗೆ ಈ ವಿಷಯದ ಕುರಿತು ಮಾತನಾಡಲು ಪಶ್ಚಿಮ ಬಂಗಾಳದಿಂದ ಪಂಜಾಬ್‌ಗೆ ಅವರು ತೆರಳಿದ್ದರು. ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಇವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಸಿಂಗ್ ಅವರನ್ನು ಪಾಕಿಸ್ತಾನಿ ಸೇನೆ ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Latest Posts

Don't Miss