ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗಪಂಚಮಿ ಆಚರಣೆ ಮಾಡಲಾಗುತ್ತಿದೆ. ಲಾಕ್‌ಡೌನ್ ಇಲ್ಲದ ಕಾರಣ ದೇವಸ್ಥಾನಗಳು ಕೂಡ ತೆರೆದಿದೆ. ಆದ್ರೆ ಕರ್ನಾಟಕದ ಅತೀ ಶ್ರೇಷ್ಠ ಶೇಷ ದೇಗುಲವೆಂದೇ ಪ್ರಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನ ಮಾತ್ರ ಇಂದೇ ಮುಚ್ಚಲಾಗಿದೆ.

ಹೌದು ಪ್ರತೀ ವರ್ಷ ನಾಗಪಂಚಮಿಯ ದಿನ ಲಕ್ಷಗಟ್ಟಲೇ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು. ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಪುನಸ್ಕಾರ ನಡೆಯುತ್ತಿತ್ತು. ಆದ್ರೆ ಈ ಬಾರಿ ಕೊರೊನಾ ಭೀತಿಯಿಂದಾಗಿ ದೇವಸ್ಥಾನವನ್ನ ಮುಚ್ಚಲಾಗಿದೆ. ಲಾಕ್‌ಡೌನ್ ಇಲ್ಲದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆ ಇದ್ದು, ಈ ಕಾರಣಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮುಚ್ಚಲಾಗಿದೆ. ಆದರೆ ದೇವಸ್ಥಾನದ ಪ್ರಧಾನ ಅರ್ಚಕರು ಸುಬ್ರಹ್ಮಣ್ಯನಿಗೆ ಸಿಂಪಲ್ ಆಗಿ ವಿಶೇಷ ಪೂಜೆ ನೇರವೇರಿಸಿದ್ದಾರೆ.
ಇನ್ನೊಂದೆಡೆ ಉತ್ತರ ಕರ್ನಾಟಕದಲ್ಲಿ ನಾಗಪಂಚಮಿಗೆ ಅಣ್ಣ ತನ್ನ ತಂಗಿಯನ್ನ ಗಂಡನ ಮನೆಯಿಂದ ತವರು ಮನೆಗೆ ಕರೆ ತರುವ ಸಂಪ್ರದಾಯವಿದ್ದು, ಇದಕ್ಕೂ ಬ್ರೇಕ್ ಹಾಕಲಾಗಿದೆ. ಒಂದು ಊರಿಂದ ಮತ್ತೊಂದು ಊರಿಗೆ ಯಾರೂ ಬರಬಾರದೆಂದು ಕೆಲ ಕಡೆ ಸ್ವಯಂ ಲಾಕ್‌ಡೌನ್ ಮಾಡಲಾಗಿದೆ.
ವರ್ಷ ಶುರುವಾದಂತೆ ವಕ್ಕರಿಸಿದ ಕೊರೊನಾ ಮಹಾಮಾರಿ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಸಂಕ್ರಾಂತಿ ಒಂದು ಬಿಟ್ಟರೆ, ಯುಗಾದಿ ಹಬ್ಬದಿಂದ ಇಂದಿನವೆರಗೂ ಯಾವ ಹಬ್ಬವನ್ನೂ ಪ್ರತಿವರ್ಷದಂತೆ ಅದ್ಧೂರಿಯಾಗಿ ಆಚರಣೆ ಮಾಡಲಾಗಲಿಲ್ಲ. ಇನ್ನು ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬವನ್ನ ಎಂದಿನಂತೆ ಅಧ್ಧೂರಿಯಾಗಿ ಆಚರಿಸುವುದು ಬಹುತೇಕ ಡೌಟ್ ಎನ್ನಲಾಗಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.