- Advertisement -
Hubli News: ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಮತ್ತೆ ಒಂದು ಎಂ ಸ್ಯಾಂಡ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಹೊರವಲಯದಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯತ್ತಿತ್ತು. ಇನ್ನು ಈ ಬಗ್ಗೆ ಮಾಹಿತಿ ಕೆಲೆಹಾಕಿದ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿ ಮೋಹನ ಸಾಲಿ ನೇತೃತ್ವದ ತಂಡ ಹುಬ್ಬಳ್ಳಿಯ ಹೊರವಲಯದಲ್ಲಿ ದಾಳಿ ಮಾಡಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದ ಟಿಪ್ಪರ್ ವಾಹನವನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಿ ಎರಡು ಪ್ರತ್ಯೇಕ ಪ್ರಕರಣ ದಾಖಲು ಮಾಡಿದ್ದಾರೆ.
- Advertisement -