Wednesday, June 18, 2025

Latest Posts

ಹಳಬರನ್ನ ಕೈ ಬಿಡಿ, ಹೊಸಬರನ್ನ ಮಂತ್ರಿ ಮಾಡಿ : ಸಿಎಂ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಡಿಕೆಶಿ ಆಪ್ತ ಶಾಸಕ..

- Advertisement -

Political News: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದೇ ಇರುವ ಸಚಿವರ ರಾಜೀನಾಮೆಯನ್ನು ಪಡೆಯಬೇಕು ಎಂದು ಹೇಳಿಕೆ ನೀಡುವ ಮೂಲಕ ಚರ್ಚೆ ಹುಟ್ಟು ಹಾಕಿದ್ದ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಚನ್ನಗಿರಿಯ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಇದೀಗ ಅಂತದ್ದೆ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಸರ್ಕಾರದ ಎರಡು ವರ್ಷದ ಸಾಧನೆ ಎಂದು ಹೇಳುತ್ತಾರೆ, ಆದರೆ ಕೆಲವು ಸಚಿವರು ಏನೂ ಸಾಧನೆ ಮಾಡಿಲ್ಲ ಅವರನ್ನು ಕೈ ಬಿಡಬೇಕು ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಹಳಬರು ಅಧಿಕಾರ ಅನುಭವಿಸಿ ಜಿಡ್ಡು ಹಿಡಿದಿದ್ದಾರೆ..

ದಾವಣಗೆರೆಯಲ್ಲಿಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವೇಳೆ, ಸಂಪುಟ ಪುನಾರಚನೆಯಾದಾಗ ಹಳಬರ ಸಚಿವ ಸ್ಥಾನಕ್ಕೆ ಕೊಕ್ ಕೊಟ್ಟರೆ ಒಳ್ಳೆಯದು. ಹಳಬರು ಅಧಿಕಾರ ಅನುಭವಿಸಿ ಜಿಡ್ಡು ಹಿಡಿದು ಹೋಗಿದ್ದಾರೆ. ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತಾರೆ. ನಾನು ಸನ್ಯಾಸಿ ಅಲ್ಲ, ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎನ್ನುವ ಮೂಲಕ ಮಂತ್ರಿಗಿರಿಯ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಮಂತ್ರಿಗಳ ರಿಪೋರ್ಟ್ ನೋಡಿ ಹೈಕಮಾಂಡ್ 8-10 ಜನರ ಕೈ ಬಿಡಲಿ..

ಅಲ್ಲದೆ ನಾನು ಮಂತ್ರಿಯಾದ ಬಳಿಕ ಏನು ಕೆಲಸ ಮಾಡುತ್ತೇನೆ ಎಂದು ಆರು ತಿಂಗಳ ಬಾಂಡ್ ಬೇಕಾದರೂ ಕೊಡ್ತಿನಿ. ಜಿಲ್ಲೆಯ ಹಿರಿಯ ರಾಜಕಾರಣಿ ಶಾಸಕ ಶಾಂತನಗೌಡ್ರಿಗೆ ಕೊಟ್ಟರೂ ನಾನು ಖುಷಿ ಪಡುತ್ತೇನೆ. ಅಷ್ಟಕ್ಕೂ ಒಂದು ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಡಬಾರದು ಅಂತ ಏನಾದರೂ ಇದೆಯೇ? ಹೈಕಮಾಂಡ್ ಈಗಿನ ಸಚಿವರ ರಿಪೋರ್ಟ್ ನೋಡಿ ಅವರನ್ನೆಲ್ಲ ಕೈ ಬಿಡಬೇಕು. ಸಂಪುಟದಲ್ಲಿ 8-10 ಜನರನ್ನು ಕೈಬಿಡಲಿ, ಹೊಸಬರಿಗೆ ಅವಕಾಶ ಕೊಡಲಿ ಎಂದು ಒತ್ತಾಯಿಸಿದ್ದಾರೆ.

ಈಗ ಉತ್ತಮವಾದ ಮುಖ್ಯಮಂತ್ರಿಗಳು ಇದ್ದಾರೆ..

ಈಗ 5 ರಿಂದ 6 ಬಾರಿ ಗೆದ್ದ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ಅವರಿಗೂ ಸಿಗಲಿ. ಎರಡುವರೆ ವರ್ಷ ಅಧಿಕಾರ ಹಂಚಿಕೆ ವಿಚಾರ ಈಗ ಮಾತನಾಡೋದು ಬೇಡ. ಉತ್ತಮವಾದ ಮುಖ್ಯಮಂತ್ರಿಗಳು ಇದ್ದಾರೆ ಎಂದು ಶಾಸಕ ಬಸವರಾಜ್ ಶಿವಗಂಗಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮರು ಜಾತಿಗಣತಿ ಮಾಡಿದ್ರೆ ಸ್ವಾಗತಿಸುತ್ತೇನೆ..

ಮರು ಜಾತಿಗಣತಿ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ಮಾತನಾಡುತ್ತೇನೆ. ಈ ಬಗ್ಗೆ ಸಿಎಂ ದೆಹಲಿಯಲ್ಲಿ ಮಾತಾಡಿದಂತೆ ಕಾಣುತ್ತದೆ. ಮರು ಜಾತಿಗಣತಿ ಮಾಡುವುದಾದರೆ ನಾನು ಆ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಜಾತಿ ಗಣತಿ ವ್ಯವಸ್ಥಿತವಾಗಿ ಆಗಿಲ್ಲ ಎಂಬ ಮಾತನ್ನು ಹಿಂದಿನಿಂದಲೂ ಹೇಳುತ್ತಿದ್ದೇನೆ. ಹಳೆಯ ವರದಿಯಲ್ಲಿ 60 ಸಾವಿರ ಲಿಂಗಾಯತರು ಇದ್ದಾರೆ ಎಂಬ ವರದಿ ತಪ್ಪಾಗಿತ್ತು. ಮರು ಸಮೀಕ್ಷೆಗೆ ಒತ್ತಾಯಿಸಿದ್ದು ನಾನೇ ಮೊದಲಿಗ ಎಂದು ಶಾಸಕ ಶಿವಗಂಗಾ ತಿಳಿಸಿದ್ದಾರೆ.

- Advertisement -

Latest Posts

Don't Miss