National News: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನ

National News: Takeoff ಆದಂತೆಯೇ ವಿಮಾನ ಪತನವಾದ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ನಡೆದಿದೆ. 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನ ಇದಾಗಿದ್ದು, ಅಹಮದಾಬದ್‌ನ ವಿಮಾನ ನಿಲ್ದಾಣದ ಬಳಿ ವಸತಿ ಪ್ರದೇಶದಲ್ಲಿ ಲ್ಯಾಂಡ್ ಆಗಿದ್ದು, ಈ ದುರ್ಘ”ನೆ ಸಂಭವಿಸಿದೆ. ಇನ್ನು ವಿಮಾನದಲ್ಲಿದ್ದವರೆಲ್ಲ ಪ್ರಾಣಾಪಾಯದಿಂದ ಪಾರಾಗಿ ಬರಲಿ ಎಂದು ದೇಶದ ಜನತೆ ಪ್ರಾರ್ಥಿಸಿದೆ.

ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ Tweet ಮಾಡಿ ಪ್ರಾರ್ಥಿಸಿದ್ದಾರೆ.

 

 

About The Author