Tuesday, June 17, 2025

Latest Posts

National News: ವಿಮಾನ ಪತನ: ಘಟನೆಗೆ ಸಂತಾಪ ವ್ಯಕ್ತಪಡಿಸಿದ ಗಣ್ಯರು..

- Advertisement -

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ“ಡೆದು, ಆಗ ತಾನೇ ಊಟಕ್ಕೆ ಕುಳಿತಿದ್ದ 7 ಮೆಡಿಕಲ್ ವಿದ್ಯಾರ್ಥಿಗಳ ಜೀವನ ಅಂತ್ಯವಾಗಿದೆ ಎನ್ನುವುದು ಕೂಡ ದುಃಖಕರ ಸಂಗತಿಯಾಗಿದೆ..

ಘಟನೆಗೆ ಕರ್ನಾಟಕದ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ Tweet ಮಾಡಿದ್ದಾರೆ.

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಭ್ರಮೆ ಉಂಟು ಮಾಡಿದೆ. ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ Tweet ಮಾಡಿದ್ದಾರೆ.

ಗುಜರಾತ ರಾಜ್ಯದ ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ತಾಂತ್ರಿಕ ದೋಷದಿಂದ ಪತನವಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರು ಇದ್ದ ಬಗ್ಗೆ ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಈ ದುರಂತದಲ್ಲಿ ಸಾವೀಗಿಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಹೇಳಿದ್ದಾರೆ.

ಅಹ್ಮದಾಬಾದ್ ನಿಂದ ಲಂಡನ್ ತೆರಳುತ್ತಿದ್ದ 242 ಪ್ರಯಾಣಿಕರನ್ನು ಒಳಗೊಂಡ ಏರ್ ಇಂಡಿಯಾ ವಿಮಾನ ಪತನದ ದುರಂತ ಅತ್ಯಂತ ದುರದೃಷ್ಟಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಚಿಕಿತ್ಸೆ ಪಡೆಯುತ್ತಿರುವ ಪ್ರಯಾಣಿಕರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಮಾಜಿ ಸಿಎಂ ಬಸವರಾಜ್ ಬ“ಮ್ಮಾಯಿ ಕೂಡ ಈ ಬಗ್ಗೆ Tweet ಮಾಡಿ, ಗುಜರಾತ್ ನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತಕ್ಕೆ ಈಡಾಗಿರುವ ಸುದ್ದಿ ಕೇಳಿ ಅತ್ಯಂತ ಆಘಾತವಾಗಿದೆ. ಈ ಅವಗಢದಲ್ಲಿ ನೂರಾರು ಜನರು ಜೀವ ಕಳೆದುಕೊಂಡಿರುವುದು ಅತ್ಯಂತ ದುಖದ ಸಂಗತಿ. ಈ ಘೋರ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ದೇವರು ಚಿರ ಶಾಂತಿ ನೀಡಲಿ, ಮೃತರ ಕುಟುಂಬಸ್ಥರಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಸವರಾಜ ಬ“ಮ್ಮಾಯಿ ಹೇಳಿದ್ದಾರೆ.

- Advertisement -

Latest Posts

Don't Miss