Sunday, November 16, 2025

Latest Posts

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

- Advertisement -

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ“ಂಡಿದ್ದರು. ಅಲ್ಲದೇ, ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಲಂಚ ನೀಡಿದವರಿಗಷ್ಟೇ ವಸತಿ ನಿಗಮಗಳಿಂದ ಮನೆ ವಿತರಣೆಯಾಗುತ್ತಿದೆ ಎಂದ ಆಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

‘ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆ ಭ್ರಷ್ಟಾಚಾರ, ಲಂಚಗುಳಿತನದಿಂದ ಗಬ್ಬುನಾರುತ್ತಿದೆ’ ಎನ್ನುವುದನ್ನು ಕಾಂಗ್ರೆಸ್ ಸಚಿವರು, ಶಾಸಕರೇ ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾರೆ. ಸ್ವತಃ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಕಂದಾಯ ಇಲಾಖೆಯಲ್ಲಿನ ಲಂಚಾವತಾರದ ಸ್ಥಿತಿ ಕಂಡು ಹತಾಶೆಗೊಂಡಿದ್ದಾರೆ. ಕಚೇರಿಗಳಲ್ಲಿ ಲಂಚದ ದರ ಪಟ್ಟಿಗಳನ್ನು ಲಗತ್ತಿಸಿಬಿಡಿ…..”ಎಂದು ತಮ್ಮ ಅಸಹಾಯಕ ಪರಿಸ್ಥಿತಿಯ ವಸ್ತು ಸ್ಥಿತಿ ಚಿತ್ರಣವನ್ನು ತೆರೆದಿಟ್ಟು ಅಧಿಕಾರಿ, ಸಿಬ್ಬಂದಿಗಳ ಮೇಲೆ ಹರಿಹಾಯ್ದಿದ್ದಾರೆ ಎಂದು ವಿಜಯೇಂದ್ರ ಟ್ವೀಟಿಸಿದ್ದಾರೆ.

ಮತ್ತೊಂದೆಡೆ ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆದ ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಲಂಚ ನೀಡಿದವರಿಗಷ್ಟೇ ವಸತಿ ನಿಗಮಗಳಿಂದ ಮನೆ ವಿತರಣೆಯಾಗುತ್ತಿರುವುದರ ವಿವರ ನೀಡಿದ್ದಾರೆ. ವಸತಿ ಸಚಿವರ ಆಪ್ತ ಕಾರ್ಯದರ್ಶಿಯೊಂದಿಗೆ ನಡೆಸಿರುವ ಸಂಭಾಷಣೆಯ ಆಡಿಯೋ ತುಣುಕುಗಳು ಮಾಧ್ಯಮಗಳನ್ನು ಸೇರಿದೆ. ರಾಜ್ಯ ಸರ್ಕಾರದ ಆಡಳಿತದಲ್ಲಿ ಮಂತ್ರಿ, ಶಾಸಕರುಗಳ ಪರಿಸ್ಥಿತಿಯೇ ಈ ಪರಿಯಾದರೆ, ಇನ್ನು ಜನಸಾಮಾನ್ಯರ ಸ್ಥಿತಿ ಕಲ್ಪನಾತೀತವಾಗಿದೆ.

ಖಾತೆ, ಕಂದಾಯ, ಪಹಣಿಯಿಂದಿಡಿದು ಪ್ರತಿಯೊಂದು ಕೆಲಸಕ್ಕೂ ಇಂತಿಷ್ಟು ಲಂಚ ಕೊಟ್ಟೇ ಜನರು ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಈ ಪರಿಸ್ಥಿತಿ ಯಾವುದೇ ಇಲಾಖೆ ಹೊರತಾಗಿಲ್ಲ, ಮುಖ್ಯಮಂತ್ರಿಗಳ ಕಾರ್ಯಾಲಯ,ಸಚಿವಾಲಯಗಳಿಂದಲೇ ಲಂಚಗುಳಿತನ, ಪರ್ಸೆಂಟೇಜ್ ವ್ಯವಹಾರ ಎಲ್ಲೆ ಮೀರಿದೆ ಎಂದು ಕಾಂಗ್ರೆಸ್ಸಿಗರು ಹೇಳತೊಡಗಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಒಂದು ಕಡೆ ಬೆಲೆ ಏರಿಕೆಯ ಸಂಕಟ, ಮತ್ತೊಂದು ಕಡೆ ಲಂಚ, ವಸೂಲಿ, ಲೂಟಿಕೋರತನದ ಹಾವಳಿಯಿಂದ ಜನ ಹಾಗೂ ಕರ್ನಾಟಕ ತತ್ತರಿಸುತ್ತಿದೆ, ಸಾಮಾನ್ಯರು ಹಾಗೂ ಬಡಜನರ ಗೋಳು ಹೇಳತೀರದಾಗಿದೆ. ಪಂಚ ಭಾಗ್ಯಗಳನ್ನು ಮುಂದಿಟ್ಟುಕೊಂಡು ತಮ್ಮ ಹುಳುಕುಗಳನ್ನೆಲ್ಲ ಮುಚ್ಚಿಕೊಳ್ಳಲು @siddaramaiahನವರ ಸರ್ಕಾರ ವ್ಯರ್ಥ ಕಸರತ್ತು ನಡೆಸುತ್ತಿದೆ.

ಕಾನೂನು, ಸುವ್ಯವಸ್ಥೆ, ಆರ್ಥಿಕ ಸ್ಥಿತಿ, ಅಭಿವೃದ್ಧಿ ಸಂಪೂರ್ಣ ನೆಲಕಚ್ಚಿದೆ, ಇಂತಹ ಜನದ್ರೋಹಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಗ್ಗೆ ಜನ ಹಾದಿ -ಬೀದಿಗಳಲ್ಲಿ ಶಪಿಸುತ್ತಿದ್ದಾರೆ. ಸದ್ಯದಲ್ಲೇ @BJP4Karnataka ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ, ಲಂಚಪೀಡನೆಯ ವಿರುದ್ಧ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

- Advertisement -

Latest Posts

Don't Miss