ಪುಸ್ತಕ ಹಿಡಿದ ಐರಾ, ತರಕಾರಿ ಮಾರಾಟಗಾರನಾದ ನಟ, ರೈತನಿಗೆ ದೊಡ್ಡ ಗಿಫ್ಟ್ ನೀಡಿದ ಸೋನುಸೂದ್.!

ಕೊರೊನಾ, ಲಾಕ್‌ಡೌನ್ ಎಫೆಕ್ಟ್ ನಿಂದ ಜನ ತತ್ತರಿಸಿ ಹೋಗಿದ್ದಾರೆ. ದುಡಿಮೆ ಇಲ್ಲದೇ ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಸಿನಿ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವವರೆಲ್ಲ ತರಕಾರಿ ದಿನಸಿ ಮಾರಿ ಜೀವನ ನಡೆಸಲು ಮುಂದಾಗಿದ್ದಾರೆ. ನಟ ಅಕ್ಷಯ್ ಕುಮಾರ್ ಜೊತೆ ಸೂರ್ಯವಂಶಿ ಸಿನಿಮಾದಲ್ಲಿ ಕೆಲಸ ಮಾಡಿದ್ದ ನಟ ಕಾರ್ತಿಕ್ ಸಾಹೋ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ.

ಚಿತ್ತೂರಿನ ರೈತ ನಾಗೇಶ್ವರ್ ರಾವ್ ತನ್ನಿಬ್ಬರ ಹೆಣ್ಣು ಮಕ್ಕಳನ್ನ ನೇಗಿಲ ರೀತಿ ಬಳಸಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿದ್ದು, ಇದನ್ನು ಕಂಡ ಸೋನು ಸೂದ್ ಮೊದಲು ಆ ರೈತರಿಗೆ ಎರಡು ಎತ್ತುಗಳನ್ನ ನೀಡಲು ನಿರ್ಧರಿಸಿದ್ದರು. ಆದ್ರೆ ಬಳಿಕ ಟ್ರಾಕ್ಟರ್ ನೀಡುವ ಮೂಲಕ ರೈತರಿಗೆ ಸರ್ಪ್ರೈಸ್ ನೀಡಿದ್ದಾರೆ.

ನಟಿ ಸುಧಾರಾಣಿ ಅನಾರೋಗ್ಯದ ನಿಮಿತ್ತವಾಗಿ ಮಧ್ಯರಾತ್ರಿ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾಗ ಅವರಿಗೆ ಚಿಕಿತ್ಸೆ ನೀಡಲು ನಿರಾಕರಿಸಿ, ಕಾಯಿಸಿದ್ದರೆಂದು ಸುಧಾರಾಣಿ ಆರೋಪಿಸಿದ್ದರು. ಇದಕ್ಕೆ ಟ್ವೀಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಸಚಿವ ಡಾ.ಕೆ,ಸುಧಾಕರ್, ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಕೊರೊನಾ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟಿ ಐಶ್ವರ್ಯಾ ರೈ ಮತ್ತು ಅವರ ಪುತ್ರಿ ಆರಾಧ್ಯ ಬಚ್ಚನ್‌, ಇದೀಗ ಕೋವಿಡ್ ನೆಗೆಟಿವ್ ಎಂದು ಸಾಬೀತಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಭಿಷೇಕ್, ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹಾರೈಕೆಗಳಿಗೆ ಧನ್ಯವಾದಗಳು ಎಂದಿದ್ದಾರೆ.

ರಾಧಿಕಾ ಪಂಡಿತ್ ಇನ್‌ಸ್ಟಾಗ್ರಾಮ್‌ನಲ್ಲಿ ಮಗಳು ಐರಾ ಪುಸ್ತಕ ಓದುತ್ತಿರುವ ಫೋಟೋ ಅಪ್ಲೋಡ್ ಮಾಡಿದ್ದು, ನಾನು ನನ್ನ ಮಗಳಿಗೆ ಮೊಬೈಲ್, ಟಿವಿ ತೋರಿಸುವುದರ ಬದಲಾಗಿ ಓದಲು ಪುಸ್ತಕ ನೀಡುತ್ತಿದ್ದೇನೆ. ಆಕೆಗೆ ಓದಿನಲ್ಲಿ ಆಸಕ್ತಿ ಬರಲಿ ಎಂಬುದು ನನ್ನ ಉದ್ದೇಶ. ಆದ್ರೆ ಈಗ ಅವಳು ಬರೀ ಚಿತ್ರವನ್ನಷ್ಟೇ ನೋಡುತ್ತಿದ್ದಾಳೆ ಎಂದು ಹೇಳಿದ್ದಾರೆ. ಅಲ್ಲದೇ, ಅನುಪ್ರಭಾಕರ್ ಮತ್ತು ರಘು ಮುಖರ್ಜಿಗೆ ಪುಸ್ತಕ ಗಿಫ್ಟ್ ಮಾಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author