Dharwad News: ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಮನೆ ಮೇಲೆ ದಾಳಿ

Dharwad News: ಧಾರವಾಡ: ಧಾರವಾಡದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಎಂಬ ಅಧಿಕಾರಿ ಮನೆ, ಕಚೇರಿ ಮೇಲೆ ರೇಡ್ ಆಗಿದೆ. ಧಾರವಾಡ ನಗರದ ಕೆವಿಜಿ ಬ್ಯಾಂಕ್ ಬಳಿ ಇರುವ ಕ್ವಾಟ್ರಸ್ ಸೇರಿ, ಇಂಜಿನಿಯರ್ ಕಚೇರಿ ಮೇಲೂ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದಾರೆ.

ಇಂಜಿನಿಯರ್ಗೆ ಸೇರಿದ ಬೆಳಗಾವಿಯ ಮೂಲ ಮನೆ ಹಾಗೂ ಬಾಗಲಕೋಟೆ ಜಿಲ್ಲೆಯ ಕಜ್ಜಿದೋಣಿ ಸೇರಿ ಜಮಖಂಡಿ, ಜಕನೂರು ಮನೆ ಮೇಲೂ ಲೋಕಾ ದಾಳಿ ನಡೆಸಿದೆ. ಲೋಕಾ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

About The Author