Monday, October 27, 2025

Latest Posts

ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಸೂರಜ್ ರೇವಣ್ಣಗೆ ಗುಡ್‌ನ್ಯೂಸ್‌!

- Advertisement -

 

ಜೆಡಿಎಸ್‌ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), ಸೆಕ್ಷನ್ 342 (ಅಕ್ರಮ ಬಂಧನ), ಸೆಕ್ಷನ್ 506 (ಬೆದರಿಕೆ)ಯೊಡ್ಡಿದ್ದ ಆರೋಪದಡಿ ಎಫ್ಐಆರ್ ದಾಖಲಿಸಲಾಗಿತ್ತು.

ಮೊದಲು ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಿದ್ರು. ಹಾಸನ ಎಸ್ಪಿಗೂ ದೂರಿನ ಪ್ರತಿ ಇ ಮೇಲ್ ಮಾಡಿದ್ರು. ಬಳಿಕ ಸಂತ್ರಸ್ತನನ್ನ ಕರೆಸಿಕೊಂಡು ಮಾಹಿತಿ ಪಡೆದು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ರು. ನಂತರ ಹೊಳೆನರಸೀಪುರ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿತ್ತು.

ಇನ್ನು, ಪ್ರತಿ ದೂರು ನೀಡಲು ಸೂರಜ್ ರೇವಣ್ಣ, ಹಾಸನದ ಸೆನ್ ಪೊಲೀಸ್ ಠಾಣೆಗೆ ಬಂದಿದ್ರು. ಅಲ್ಲಿಯೇ ಅವರನ್ನು ಬಂಧಿಸಲಾಗಿತ್ತು. 2024ರ ಜೂನ್ 23ರಂದು ಸೂರಜ್ ರೇವಣ್ಣ ಅವರ ಬಂಧನವಾಗಿತ್ತು. ಹಾಗೆಯೇ ಜುಲೈ 22ರಂದು 1 ತಿಂಗಳ ಬಳಿಕ ಷರತ್ತು ಬದ್ಧ ಜಾಮೀನು ಸಿಕ್ಕಿತ್ತು.

ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಅಂತಾ, ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತರ ವಿರುದ್ಧ ಪ್ರತಿ ದೂರು ನೀಡಿದ್ರು. 5 ಕೋಟಿ ಕೊಡದಿದ್ರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಅಂತಾ ಬ್ಲ್ಯಾಕ್ ಮೇಲ್ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ರು.

ಈ ಎಲ್ಲಾ ಬೆಳವಣಿಗೆಗಳ ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಅಂತಿಮವಾಗಿ ಒಂದು ಪ್ರಕರಣದಲ್ಲಿ ಸೂರಜ್ ರೇವಣ್ಣಗೆ ರಿಲೀಫ್ ಸಿಕ್ಕಿದೆ. 1 ವರ್ಷದ ಬಳಿಕ ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದು, ಸೂರಜ್ ರೇವಣ್ಣ ನಿಟ್ಟುಸಿರು ಬಿಡುವಂತೆ ಮಾಡಿದೆ.

- Advertisement -

Latest Posts

Don't Miss