ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವ ಬಗ್ಗೆ ಬಿಬಿಎಂಪಿ ನೋಟೀಸ್ ಹೊರಡಿಸಿದೆ.
ಬಕ್ರೀದ್ ಹಬ್ಬ ಆಚರಣೆ / ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿ-ದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಕೆಳಕಂಡ ಸ್ಥಳಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.
- ರಸ್ತೆಗಳು , ಪಾದಚಾರಿ ಮಾರ್ಗಗಳು.
- ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಮ್ಗಳ ಒಳ ಮತ್ತು ಹೊರ ಆವರಣಗಳು.
- ಶಾಲೆ, ಕಾಲೇಜುಗಳ ಒಳ ಮತ್ತು ಹೊರ ಆವರಣಗಳಲ್ಲಿ, ಆಟದ ಮೈದಾನಗಳಲ್ಲಿ.
- ದೇವಸ್ಥಾನಗಳ / ಮಸೀದಿಗಳ ಹಾಗೂ ಇತರೆ ಧಾರ್ಮಿಕ ಸ್ಥಳದ ಆವರಣಗಳಲ್ಲಿ.
- ಉದ್ಯಾನವನಗಳ ಒಳಗೆ ಮತ್ತು ಹೊರಗೆ
- ಅಥವಾ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ.
- ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಕಾಯ್ದೆ 1976 ರ ಪ್ರಕಾರ ಅನಧಿಕೃತವಾಗಿ ಪ್ರಾಣಿವಧೆ ಮಾಡುವುದರ ಬಗ್ಗೆ ಸ್ಪಷ್ಟಪಡಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು.
- ಕರ್ನಾಟಕ ರಾಜ್ಯ ಪ್ರಾಣಿವಧಾ ನಿಯಂತ್ರಣ ನಿಯಮ 1959 ರ ಸೆಕ್ಷನ್ 3 ರ ಪ್ರಕಾರ ಹಾಗೂ ತಿದ್ದುಪಡಿ ಕಾಯ್ದೆ 1975 ರ ಪ್ರಕಾರ ಅನಧಿಕೃತ ಪ್ರಾಣಿವಧೆ ಶಿಕ್ಷಾರ್ಹ ಅಪರಾಧವಾಗಿದ್ದು , ಅಂಥಹವರಿಗೆ 6 ತಿಂಗಳ ಸಜೆ ಅಥವಾ ರೂ. 1000/-ಗಳ ದಂಡ ಅಥವಾ ಎರಡೂ ವಿಧಿಸಬಹುದಾಗಿದೆ.
- ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ, ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶವಿರುತ್ತದೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.