Thursday, July 31, 2025

Latest Posts

ಹಿರಿಯ ನಾಯಕ ಖರ್ಗೆರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತಿದೆ ಅಂತಾ ಗೊತ್ತಾಗುತ್ತಿದೆ: ಪ್ರಹ್ಲಾದ್ ಜೋಶಿ

- Advertisement -

Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ.

ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ‌ ಇದೆ. ನಮಗೇನೂ‌ ಗೊತ್ತಾಗೊದಿಲ್ಲ.” ಇಂತಹ ಮಾತನ್ನು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿರುವುದು ಕಾಂಗ್ರೆಸ್ ಪಕ್ಷ ಅವರನ್ನು ನಡೆಸಿಕೊಳ್ಳುವ ರೀತಿಯನ್ನು ಪ್ರದರ್ಶಿಸಿದೆ. ಕಾಂಗ್ರೆಸ್ ಪಕ್ಷ ಕೇವಲ ಹೆಸರಿಗೆ ಮಾತ್ರ ಅಧಿಕಾರವನ್ನು ಖರ್ಗೆಯವರಿಗೆ ನೀಡಿದೆಯಾ? ಅವರಿಗೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ‌ನೀಡದೇ ಕೈಗೊಂಬೆಯಂತೆ ಕಾಂಗ್ರೆಸ್ ಪಕ್ಷ ನಡೆಸಿಕೊಳ್ಳುತ್ತಿರುವುದು ನಿಜಕ್ಕೂ ದುರಂತ. ಅಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ಮಲ್ಲಿಕಾರ್ಜುನ ಖರ್ಗೆ. ಇಬ್ಬರ ಪರಿಸ್ಥಿತಿಯೂ ಒಂದೇ ಆಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ರಾಜಕಾರಣಿಗಳಿಗೆ ಬೆಲೆ ಇಲ್ಲ ಅನ್ನೊದು ಇದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

- Advertisement -

Latest Posts

Don't Miss