Hubli News: ಹುಬ್ಬಳ್ಳಿ: ದೇಶದಲ್ಲಿ 90% ಜನರು ಅಸಂಘಟಿತ ಕಾರ್ಮಿಕರಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಕಾರ್ಯವನ್ನು ಮಾಡುತ್ತೇವೆ. ಇದರಲ್ಲಿ ಅಧಿಕಾರಿ ವರ್ಗದ ಕಾರ್ಯವೂ ಕೂಡ ಶ್ಲಾಘನೀಯ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ವೇಳೆಯಲ್ಲಿ ಮಾತನಾಡಿದ ಅವರು, ಕಾರ್ಮಿಕರು ನಿಜವಾದ ಶ್ರಮಿಕರು, ಕಾರ್ಮಿಕರ ಅಭಿವೃದ್ಧಿ ಹಾಗೂ ಭದ್ರತೆ ಒದಗಿಸುವುದು ಕಾರ್ಮಿಕ ಇಲಾಖೆ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯು ಶ್ರಮವಹಿಸುತ್ತಿದೆ ಎಂದರು.
ಅಸಂಘಟಿತ ಕಾರ್ಮಿಕ ವಲಯದಲ್ಲಿ ಹದಿಮೂರಕ್ಕೂ ಹೆಚ್ಚು ಕಾರ್ಮಿಕ ವರ್ಗದ ಫಲಾನುಭವಿಗಳನ್ನು ಗುರುತಿಸಿ ಸಾಮಾಜಿಕ ಭದ್ರತೆ ನೀಡುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದರು.
ಗ್ರಾಚ್ಯೂಟಿ ಫಂಡ್ ನಿಂದ 65 ಲಕ್ಷ ಶ್ರಮಿಕರಿಗೆ ಅನುಕೂಲ: ಸಚಿವ ಸಂತೋಷ ಲಾಡ್
ಗ್ರಾಚ್ಯೂಟಿ ಫಂಡ್ ನಲ್ಲಿ ಸುಮಾರು 6 ಸಾವಿರ ಕಂಪನಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದು, ಇದರಿಂದ 65 ಲಕ್ಷ ಜನ ಉದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಸ್ಮಾರ್ಟ್ ಕಾರ್ಡ್ ವಿತರಣೆ ವೇಳೆಯಲ್ಲಿ ಮಾತನಾಡಿದ ಅವರು, ಗ್ಯಾಚ್ಯೂಟಿ ಫಂಡ್ ನಿಂದ ಕಾರ್ಮಿಕರ ಕುಟುಂಬಕ್ಕೆ ಬಹುದೊಡ್ಡ ಆಸರೆಯಾಗಲಿದೆ. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಇಂತಹದೊಂದು ಮಹತ್ವದ ಕಾರ್ಯಸಾಧನೆಯ ಮೂಲಕ ಶ್ರಮಿಕ ವರ್ಗದ ನೆರವಿಗೆ ನಿಲ್ಲಲಿದೆ ಎಂದು ಅವರು ಹೇಳಿದರು.