Shivamogga News: ಸಿಂಗಂದೂರು ಚೌಡೇಶ್ವರಿ ದೇವಿಯನ್ನು ನೋಡಲು ಇಷ್ಟು ದಿನ ಬಾರ್ಜ್ ಏರಿ ಹೋಗಬೇಕಿತ್ತು. ಆದರೆ ಇದೀಗ ಸೇತುವೆ ನಿರ್ಮಾಣವಾಗಿದ್ದು, ಈ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಯಡಿಯೂರಪ್ಪ ಅವರು ಹಾಗೂ ಕೇಂದ್ರ ಸಾರಿಗೆ ಸಚಿವ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರ ಪ್ರಯತ್ನ ದಿಂದಾಗಿ 473 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ದೇಶದ 2ನೇ ಅತಿದೊಡ್ಡ ಸಾಗರ ತಾಲೂಕಿನ ಹೊಳೆಬಾಗಿಲು- ಕಳಸವಳ್ಳಿ ಸೇತುವೆ ಲೋಕಾರ್ಪಣೆ ಸಮಾರಂಭವು ಜುಲೈ 14ರಂದು ಕೇಂದ್ರ ಭೂಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರ ಉಪಸ್ಥಿತಿಯಲ್ಲಿ ನೆರವೇರಲಿದೆ ಎಂದಿದ್ದಾರೆ.
ವಿಶ್ವ ಮಟ್ಟದಲ್ಲಿ ಗಮನ ಸೆಳೆಯುವ ಈ ಸೇತುವೆಗೆ ಶ್ರೀ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ ಮಾಡ ಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸುವ ಜತೆಗೆ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ರಾಜ್ಯ ಮತ್ತು ಹೊರರಾಜ್ಯದಿಂದ ಬರುವ ಭಕ್ತಾದಿಗಳಿಗೆ ಅನುಕೂಲವಾಗಲಿದೆ.
ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಸಾಧಿಸುತ್ತಿರುವ ಬೆನ್ನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 20 ಸಾವಿರ ಕೋಟಿರೂ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ, ಸೇತುವೆ ನಿರ್ಮಾಣ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕಾರ್ಯಗಳು ಸಾಗಿದ್ದು, ಇದು ಕ್ಷೇತ್ರದ ವಿಶೇಷ ಸಾಧನೆ ಎಂದು ತಿಳಿಸಲು ಹೆಮ್ಮೆಯಾಗುತ್ತದೆ ಮತ್ತು ಸಿಗಂದೂರು ಸೇತುವೆ ನಿರ್ಮಾಣದಿಂದ ನನಗೆ ಸಾರ್ಥಕತೆಯ ಭಾವನೆ ಮೂಡಿದೆ ಎಂದು ರಾಘವೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಬರೆದುಕ“ಂಡಿದ್ದಾರೆ.