Saturday, July 12, 2025

Latest Posts

ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕಾಗಿ ಆಟದ ಮೂಲಕ ಹಣಕಾಸಿನ ವ್ಯವಹಾರ ಮಾಡ್ತಿದ್ದಾರೆ: ಮುತಾಲಿಕ್ ಕಿಡಿ

- Advertisement -

Hubli News: ಹುಬ್ಬಳ್ಳಿ: ಪೆಹಲ್ಗಾಮ್ ಗಾಯ, ನೋವು ಇನ್ನೂ ಮಾಯವಾಗಿಲ್ಲ, ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಆಟದ ಮೂಲದ ನಡೆಯುವ ಹಣಕಾಸಿನ ವ್ಯವಹಾರ ಮುಖ್ಯವೋ? ಅಥವಾ ಜನರ ಸುರಕ್ಷತೆ ಮುಖ್ಯವೋ? ಎಂಬುದನ್ನು ಸರ್ಕಾರ ಉತ್ತರ ನೀಡಬೇಕು. ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕೆ ಇನ್ನೆಷ್ಟು ಹಿಂದೂಗಳ ನೆತ್ತರು ಬೇಕು ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹರಿಹಾಯ್ದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಇನ್ನು ಬಾಂಗ್ಲಾದೇಶದಲ್ಲಿ ಹಿಂದೂಗಳ ಪರಿಸ್ಥಿತಿ ಶೋಚನೀಯವಾಗಿದೆ. ಕೂಡಲೇ ಸರ್ಕಾರ ಈ ಎರಡು ದೇಶದ ಜೊತೆಗೆ ಆಟವನ್ನು ನಿಷೇಧ ಮಾಡಬೇಕು ಎಂದು ಹೇಳಿದರು.

- Advertisement -

Latest Posts

Don't Miss