Chamarajanagara: ಕ್ಲಾಸಿನಲ್ಲಿ ಪಾಠ ಕೇಳುವಾಗಲೇ ನಾಲ್ಕನೇ ತರಗತಿ ಬಾಲಕ ಸಾ*ವು

Chamarajanagara: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಇಲ್ಲೋರ್ವ ಬಾಲಕ ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಈ ಘಟನೆ ನಡೆದಿರುವುದು ಚಾಮರಾಜನಗರದಲ್ಲಿ. ಗುಂಡ್ಲುಪೇಟೆ ತಾಲೂಕಿನ ಕುರುಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಮನೋಜ್ ಕುಮಾರ್ ಎಂಬ ಬಾಲಕ ಮೃತ ದುರ್ದೈವಿಯಾಗಿದ್ದಾನೆ. ಈತನಿಗೆ ಈ ಮುಂಚೆಯಿಂದಲೂ ಹೃದಯ ಸಂಬಂಧಿ ಖಾಯಿಲೆ ಇತ್ತು. ಈತನ ಹೃದಯದಲ್ಲಿ ರಂಧ್ರವಿದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಈತ ಚಿಕಿತ್ಸೆ ಪಡೆದಿದ್ದ.

ಇಂದು ಕ್ಲಾಸಿನಲ್ಲಿ ಅಚಾನಕ್ ಆಗಿ ಕುಸಿದು ಬಿದ್ದಿದ್ದಾನೆ. ಆತನಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಕೂಡ, ಅದಾಗಲೇ ಆತ ಸಾವನ್ನಪ್ಪಿದ್ದನೆಂದು ತಿಳಿದು ಬಂದಿದೆ.

About The Author