Saturday, July 12, 2025

Latest Posts

Political News: ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

- Advertisement -

Political News: ದೆಹಲಿಯಲ್ಲಿ ಇಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜತೆ ಮಾತನಾಡಿದರು.

ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.

ನಾಳೆ ರಾಹುಲ್ ಗಾಂಧಿಯವರು ಸಮಯ ನೀಡಿದರೆ ಭೇಟಿಯಾಗುತ್ತೇನೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮ – ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

Latest Posts

Don't Miss