Friday, July 11, 2025

Latest Posts

ಡಿಕೆ-ಸಿದ್ದು ಜೋಡೆತ್ತು! : ನಾನೇ ಸಿಎಂ ಅಂತಾ ಹೇಳೋದು ಹೊಸದಲ್ಲ

- Advertisement -

ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ದಾರೆ.

ಇದೇ ಸಮಯದಲ್ಲಿ ಬೆಟ್ಟದಲ್ಲಿ ಮಾಧ್ಯಮಗಳೂಟ್ಟಿಗೆ ಮಾತನಾಡಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕಿಯೆ ಕೊಟ್ಟಿದ್ದಾರೆ. ಅಧಿಕಾರದ ಹಂಚಿಕೆ ಒಪ್ಪಂದದ ವಿಚಾರ ನಮ್ಮ ಗಮನಕ್ಕೆ ತಂದು ಮಾಡಿದ್ದರೆ ಇಷ್ಟೆಲ್ಲಾ ಗೊಂದಲಗಳು ಆಗುತ್ತಿರಲಿಲ್ಲ. ಒಪ್ಪಂದ ಏನು ಆಗಿದೆ, ಏನು ಆಗಿಲ್ಲ ಎಂಬುದು ನಮಗೆ ಗೊತ್ತಿಲ್ಲ. ಅವರವರೇ ಚರ್ಚೆಗಳನ್ನು ಮಾಡಿ ನಿರ್ಧಾರ ಮಾಡಿಕೊಂಡಿದ್ದರು. ಹೀಗಾಗಿ ಈ ಗೊಂದಲಗಳು ಸೃಷ್ಟಿಯಾದವು. ಈಗ ಗೊ‌ಂದಲಗಳು ಬಗೆಹರಿದಂತೆ ಕಾಣುತ್ತಿದೆ. ಈ ವಿಚಾರದಲ್ಲಿ ಅಭಿಪ್ರಾಯ ಹೇಳಲು ಹಿರಿಯರು ಕಿರಿಯರು ಎಂಬುದು ಇರುವುದಿಲ್ಲ ಎಂದರು.

ಇನ್ನು 5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಅವರು ಹಿಂದೆಯೂ ಹೇಳಿದ್ದರು, ಈಗಲೂ ಅದನ್ನೇ ಹೇಳಿದ್ದಾರೆ. ಮತ್ತೊಬ್ಬರಿಗೆ ಅವಕಾಶ ಇದೆಯೋ ಇಲ್ಲವೋ ಎಂಬುದು ಹೈಕಮಾಂಡ್ ತೀರ್ಮಾನಿಸುತ್ತದೆ. ದೇವರಲ್ಲಿ‌ ನಾಡಿಗೆ ಹಾಗೂ ನನಗೂ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಇನ್ನೂ ಎರಡೂವರೆ ವರ್ಷ ಉತ್ತಮ ಆಡಳಿತ ಕೊಡುವುದು ನಮ್ಮ ಮುಂದೆ ಇದೆ. ದೇವರ ಸನ್ನಿಧಿಯಲ್ಲಿ ನಿಂತು ಹೆಚ್ಚು ರಾಜಕೀಯ ಮಾತನಾಡುವುದಿಲ್ಲ. ನಮ್ಮಲ್ಲೇ ಮೊದಲು ಎಂಬಂತೆ ಮಾಧ್ಯಮದವರಿಗೆ ಎಲ್ಲಾ ಬೆಳವಣಿಗೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ಸಿಎಂ ಕುರ್ಚಿಯ ವಿಚಾರದಲ್ಲಿ ನಾವು ಮಾಧ್ಯಮಗಳ ಮುಂದೆ ಮಾತನಾಡಬಾರದೆಂದು ಹೇಳಿದ್ದಾರೆ. ಸಭೆಗಳಲ್ಲಿ ಒಂದಿಬ್ಬರು ಶಾಸಕರ ಹೇಳಿಕೆಯ ಬಗ್ಗೆ ಚರ್ಚೆಯಾಗಿದೆ. ಯಾವ ಶಾಸಕರ ಬೆಂಬಲ ಯಾರಿಗೆ ಇದೆ ಎಂಬ ಪ್ರಶ್ನೆ ಈಗ ಯಾಕೆ ಬಂತೋ ಗೊತ್ತಿಲ್ಲ. ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಜೋಡೆತ್ತಿನ‌ ರೀತಿ ಪಕ್ಷ ಕಟ್ಟಿ, ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ರಾಜಕಾರಣದಲ್ಲಿ ಎಲ್ಲರಿಗೂ ಆಸೆ ಇರುತ್ತದೆ. ಅಂತಿಮ ತೀರ್ಮಾನಗಳು ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಪರಮೇಶ್ವರ್‌ ಅವರು ಹೇಳಿದ್ದಾರೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss