Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ
ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕಿದೆ.
ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪರ್ವೇಜ್ ಪಿ ಎನ್ ಮಾತನಾಡಿ, ಬಸ್ ನಿಲ್ದಾಣದ ಜಾಗದಲ್ಲಿ ಕಿಡಿಗೇಡಿಗಳು ಕಿಟಕಿಗೆ ಅಳವಡಿಸಿದ ಗ್ಲಾಸ್ ಗಳನ್ನು ಒಡೆದು ಹಾಕಿದ್ದಾರೆ. ಈ ನಿಲ್ದಾಣವು ಖಾಸಗಿ ವಾಹನಗಳಿಗೆ ತಂಗುದಾಣವಾಗಿದೆ. ಖಾಸಗಿ ವಾಹನಗಳ ಮಾಲೀಕರು, ನಿಲ್ದಾಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಾರೆ.
ಆದರೆ ಕೆಲ ಕಿಡಿಗೇಡಿಗಳು ಗುಟ್ಕಾ ತಿಂದು ಉಗುಳುವುದು, ಮದ್ಯ ಸೇವಿಸಿ, ಖಾಲಿ ಬಾಟಲಿ ಬಿಸಾಕಿರುವುದು, ಬೀಡಿ, ಸಿಗರೇಟ್ ಪ್ಯಾಕೆಟ್, ಪ್ಲಾಸ್ಟಿಕ್ ತ್ಯಾಜ್ಯಗಳು ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ. ಪ್ರಯಾಣಿಕರ ಅನುಕೂಲಕ್ಕೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ವ್ಯವಸ್ಥೆ, ವಿದ್ಯುತ್ ಸಂಪರ್ಕ ಇಲ್ಲವಾಗಿದೆ. ಬೆಳಕಿನ ವ್ಯವಸ್ಥೆಯಿಲ್ಲದ ಹಿನ್ನೆಲೆಯಲ್ಲಿ ರಾತ್ರಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಬಸ್ ನಿಲ್ದಾಣದ ಶೌಚಾಲಯ ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದರು.
ಕೊಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಿ ಖಾಸಗಿ ಬಸ್ ಪ್ರಯಾಣಿಕರಿಗೆ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.