Sunday, July 20, 2025

Latest Posts

ಅಣ್ಣಾಮಲೈಗೆ ಶೀಘ್ರದಲ್ಲೇ ಪ್ರಮೋಷನ್! : ಸಿಂಘಂ ಖ್ಯಾತಿಯ ಮಾಜಿ IPS ಬಿಜೆಪಿಯಲ್ಲಿ ಯಾವ ಪೋಸ್ಟ್..?

- Advertisement -

ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ ಮರು ಮಾತಾಡದೇ ಅಣ್ಣಾಮಲೈ ಅವರ ಸ್ಥಾನವನ್ನು ತ್ಯಾಗಮಾಡಿದ್ದರು.

ಬಳಿಕ ಅವರನ್ನು ಬಿಜೆಪಿ ರಾಷ್ಟ್ರೀಯ ಮಂಡಳಿಯ ಸದಸ್ಯರನ್ನಾಗಿ ನೇಮಿಸಿತ್ತು. ಇನ್ನೂ ಮುಂದಿನ ಚುನಾವಣಾ ತಂತ್ರಗಾರಿಕೆ ಹಾಗೂ ಸಮುದಾಯಿಕ ಪ್ರತಿನಿಧಿತ್ವಕ್ಕಾಗಿ ಆ ಜಾಗಕ್ಕೆ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ತಂದು ಕೂರಿಸಿತ್ತು. ಇದಾದ ಬಳಿಕ ಖುದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಣ್ಣಾಮಲೈ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಜವಾಬ್ದಾರಿಯ ಭರವಸೆ ನೀಡಿದ್ದರು.

ಇನ್ನೂ ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಶೂನ್ಯ ಸಾಧನೆ ಮಾಡಿತ್ತು. ಆದರೂ ಡಿಎಂಕೆ ಅಥವಾ ಎಐಎಡಿಎಂಕೆ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳದೆ ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಮತ ಗಳಿಕೆಯ ಪ್ರಮಾಣವನ್ನು ಶೇಕಡಾ 3 ರಿಂದ 11 ಕ್ಕೆ ಏರಿಸಿದ ಕೀರ್ತಿ ಅಣ್ಣಾಮಲೈ ಅವರಿಗೆ ಸಲ್ಲುತ್ತದೆ.

ತಾವು ಕೊಟ್ಟ ಮಾತಿನಂತೆ ಬಿಜೆಪಿ ಕಟ್ಟಾಳು ಅಣ್ಣಾಮಲೈಗೆ, ರಾಜ್ಯದಿಂದ ರಾಷ್ಟ್ರ ರಾಜಕಾರಣದತ್ತ ಸಾಗಲು ಬಿಜೆಪಿ ನಾಯಕರು ದಾರಿ ಮಾಡಿಕೊಡುವ ಸಾಧ್ಯತೆಗಳಿವೆ. ಈ ಮೂಲಕ ಅವರಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಬಹುದು ಎನ್ನಲಾಗಿದೆ. ಅದರಲ್ಲೂ ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನೆಚ್ಚಿನ ಯುವ ನಾಯಕರಾಗಿ ಇದೇ ಅಣ್ಣಾಮಲೈ ತಮ್ಮ ಸಾಮರ್ಥ್ಯದಿಂದ ಗುರುತಿಸಿಕೊಂಡಿರುವುದು ವಿಶೇಷ.

ಆದರೆ ಸದ್ಯಕ್ಕೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಣ್ಣಾಮಲೈ ತವರಿನಲ್ಲಿ ಪಕ್ಷದ ಚಟುವಟಿಕೆಯಲ್ಲಿ ಹೆಚ್ಚು ಸಕ್ರೀಯರಾಗಿದ್ದಾರೆ. ರಾಜ್ಯ ಮಟ್ಟದ ನಾಯಕರಾಗಿದ್ದರೂ, ಸಹ ತಾವು ಒಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆಯೇ ಎಲ್ಲ ಸಣ್ಣ ಪುಟ್ಟ ಸಭೆ – ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ತಳಮಟ್ಟದಿಂದ ಪಕ್ಷದ ಸಂಘಟನೆಗೆ ಈಗಿನಂದಲೇ ಕರ್ನಾಟಕ ಸಿಂಘಂ ಖ್ಯಾತಿಯ ಮಾಜಿ ಐಪಿಎಸ್ ಅಣ್ಣಾಮಲೈ ಮುಂದಾಗಿದ್ದಾರೆ.

- Advertisement -

Latest Posts

Don't Miss