ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ದಿಬ್ಬೂರು ಜಯಣ್ಣ

ಕರ್ನಾಟಕ ಟಿವಿ ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ  ದಿಬ್ಬೂರು ಜಯಣ್ಣ ಅವರು  52ನೇ ಹುಟ್ಟುಹಬ್ಬವನ್ನು ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡರು. 

ಈ ಹಿಂದೆ ಯಲಹಂಕ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿ ಹಾಗೂ ಬೆಂಗಳೂರು ಡೈರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯನ್ನು ಕಟ್ಟಿ-ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇದೇ ವೇಳೆ ದಿಬ್ಬೂರು ಜಯಣ್ಣ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಕ್ಷೇತ್ರದ ಶಾಸಕರಾದ ಎಸ್.ಆರ್.ವಿಶ್ವನಾಥ್ ಅವರು ಶುಭ ಹಾರೈಸಿದರು.

ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

About The Author