ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ನೂರಾರು ಸಾವುಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ತಂಡವನ್ನು ರಚಿಸಿದೆ. ಇದು ದೇವರ ಅವಕೃಪೆಗೆ ಕಾರಣವಾಗುತ್ತಾ? ಹೀಗೊಂದು ಮಾತು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿದೆ.
ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಅಂತಾ ಹೇಳಿದ್ದಾರೆ. ಇಂದಿನ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈ ವಿಚಾರವನ್ನು ಬಹಳಷ್ಟು ವರ್ಷಗಳ ನಂತರ, ಅನಗತ್ಯವಾಗಿ ಎಳೆಯುವಂತ ಕೆಲಸ ಮಾಡ್ತಿದ್ದಾರೆ. ಇದು ಎಲ್ಲರಿಗೂ ಗೊತ್ತಿಗೆ.
ಒಂದು ಸಮುದಾಯದ ಓಲೈಕೆಗಾಗಿ, ಮಂಜುನಾಥನ ಸನ್ನಿಧಿಗೆ ಕೆಟ್ಟ ಹೆಸರು ಬರುವಂತೆ ನಡೆದುಕೊಳ್ತಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು, ತೀವ್ರವಾಗಿ ಖಂಡಿಸುತ್ತೇನೆ ಅಂತಾ ಜನಾರ್ದನ ರೆಡ್ಡಿ ಹೇಳಿದ್ದಾರೆ. ಧರ್ಮಸ್ಥಳದ ಪ್ರಕರಣ ಇದೀಗ ರಾಜಕೀಯ ವಿಚಾರವಾಗಿ ಮಾರ್ಪಟ್ಟಿದೆ. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುತ್ತಿವೆ.