ಪಡಿತರ ಕಾರ್ಡ್ ಪರಿಷ್ಕರಣೆ ಮಾಡಬೇಕಿದೆ: ಸಚಿವ ಕೆ.ಎಚ್.ಮುನಿಯಪ್ಪ

Hubli News: ಹುಬ್ಬಳ್ಳಿ; ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಬೇಕಿದೆ. ಒಂದು ಕೋಟಿ ಕಾರ್ಡ್ ಕರ್ನಾಟಕ ಕಾರ್ಡ್ ಎಪಿಎಲ್ ಇದೆ. ನಾಲ್ಕು ಕೋಟಿ ಕಾರ್ಡ್ ಬಿಪಿಎಲ್ ಇದೆ. ಈ‌ ನಿಟ್ಟಿನಲ್ಲಿ ಪರಿಷ್ಕರಣೆ ಮಾಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಅವಶ್ಯಕತೆಯಷ್ಟು ಅಕ್ಕಿ ತೆಗೆದುಕೊಳ್ಳುತ್ತಿದ್ದೇವೆ. ಈಗ ಯಾವುದೇ ರೀತಿಯಲ್ಲಿ ಸಮಸ್ಯೆ ಇಲ್ಲ. ರಸಗೊಬ್ಬರದ ಬಗ್ಗೆ ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ.‌ ಕೇಂದ್ರ ಸರ್ಕಾರದ ಜವಾಬ್ದಾರಿ ಅದು. ಸಕಾಲಕ್ಕೆ ಗೊಬ್ಬರ ಸರಬರಾಜು ಮಾಡಬೇಕು ಎಂದರು.

ಮಳೆಯಾದ ಸಂದರ್ಭದಲ್ಲಿ ರಸಗೊಬ್ಬರದ ಬೇಡಿಕೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಅವಶ್ಯಕತೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಸರಬರಾಜು ಮಾಡಬೇಕು ಎಂದರು.

About The Author