Hubli News: ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ. ಬಾಯಿ ಬಿಟ್ಟರೇ ಮೋದಿಯವರ ಬಗ್ಗೆ ಆರ್.ಎಸ್.ಎಸ್ ಬಗ್ಗೆ ಕೆಟ್ಟ ಭಾಷೆ ಬಳಿಸುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಖರ್ಗೆ ಹಾಗೂ ರಾಹುಲ್ ಗಾಂಧಿ ಈಗ ವಿಷ ಕಾರುವ ಕೆಲಸ ಮಾಡುತ್ತಿದ್ದಾರೆ. ಆರ್.ಎಸ್.ಎಸ್ ಹಾಗೂ ಮೋದಿಯವರ ಬಗ್ಗೆ ಕೆಟ್ಟ ಭಾಷೆ ಬಳಕೆ ಮಾಡುತ್ತಿದ್ದಾರೆ. ಆರ್.ಎಸ್.ಎಸ್ ಭಾರತದಲ್ಲಿ ಇರದೇ ಇದ್ದಿದ್ದರೆ ಕಾಂಗ್ರೆಸ್ ಭಾರತವನ್ನು ಮುಸ್ಲಿಂ ದೇಶವನ್ನಾಗಿ ಮಾಡುತ್ತಿತ್ತು ಎಂದರು.
ಜವಾಹರಲಾಲ್ ನೆಹರುವಿನಿಂದ ಹಿಡಿದು ನೆಹರು ಫ್ಯಾಮಿಲಿ ಹಾಗೂ ಇಂದಿರಾ ಗಾಂಧಿ, ರಾಹುಲ್ ಗಾಂಧಿ ದೇಶಕ್ಕಾಗಿ ಏನನ್ನು ಮಾಡೇ ಇಲ್ಲ. ದೇಶವನ್ನು ಹಾಳು ಮಾಡುವ ಕೆಲಸವನ್ನು ಮಾಡಿದ್ದಾರೆ ವಿನಃ ಯಾವುದೇ ದೇಶಕ್ಕೆ ಯಾವುದೇ ಕೊಡುಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದುಳಿದಿರುವ ವರ್ಗಗಳ ಬಗ್ಗೆ ಮಾತನಾಡುವ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಏನನ್ನೂ ಮಾಡಿಲ್ಲ. ಕೇವಲ ಭಾಷಣ ಮಾಡಿದೆ ವಿನಾ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದರು.

