- Advertisement -
ಜಮೀನಿನ ವಿವಾದದ ಹಿನ್ನೆಲೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆಯಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ, ಘಟನೆ ಸಂಭವಿಸಿದೆ.
ಕೊಲೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರ ತನಿಖೆ ಆರಂಭಿಸಿದ್ದಾರೆ. ಹಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, 45 ವರ್ಷದ ನಂಜೇಶ್, ಸ್ನೇಹಿತರೊಂದಿಗೆ ಸಾತನೂರಿನ ದಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ರು. ಈ ವೇಳೆ ಸುಮಾರು ನಾಲ್ಕುರಿಂದ ಐದು ಮಂದಿ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.
ತೀವ್ರವಾಗಿ ಹಲ್ಲೆಗೊಳಾದ ಗ್ರಾ.ಪಂ. ಮಾಜಿ ಅಧ್ಯಕ್ಷ ನಂಜೇಶ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಾವಣ್ಯ ಅನಿಗೋಳ
- Advertisement -