Hubli News: ಸಿಲಿಂಡರ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೈಹಿಕ ಶಿಕ್ಷಕಿ ಸಾ*ವು

Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65% ಸುಟ್ಟ ಗಾಯಗಳಾಗಿದ್ದವು. ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಉಳಿದ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

About The Author