Hubli News: ನೇಹಾ ಹಿರೇಮಠ ಹ*ತ್ಯೆ ಪ್ರಕರಣ: ಆಗಸ್ಟ್‌ 4ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಅಗಸ್ಟ್-4ಕ್ಕೆ ಆದೇಶ ಕಾಯ್ದಿರಿಸಿದೆ.

ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ-28ರಂದು ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶವನ್ನು ಅಗಸ್ಟ್-4ಕ್ಕೆ ಕಾಯ್ದಿರಿಸಿದೆ. ಮೃತ ನೇಹಾ ಹಿರೇಮಠ ಅವರ ತಾಯಿ ಗೀತಾ ನಿರಂಜನ ಹಿರೇಮಠ ಫಿರ್ಯಾದಿದಾರರು ಆಗಿದ್ದಾರೆ.

ಇನ್ನೂ ಸುಪ್ರೀಂಕೋರ್ಟ್ ಆದೇಶದ ಸೆಕ್ಷನ್‌ಗಳ ಪ್ರಕಾರ ಫಿರ್ಯಾದಿದಾರರ ಪರ ವಕೀಲರಾದ ರಾಘವೇಂದ್ರ ಮುತಗೀಕರ ಈ ಹಿಂದೆ ಅರ್ಜಿ ಸಲ್ಲಿಸಿದ್ದು, ಈಗ ವಾದವನ್ನು ಮಂಡಿಸಿದ್ದಾರೆ. ವಾದ ವಿವಾದಗಳನ್ನು ಪರಿಶೀಲನೆ ನಡೆಸಿದ ನ್ಯಾಯಾಧೀಶರು ಆಗಸ್ಟ್-4 ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

About The Author