- Advertisement -
ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ 37 ವರ್ಷದ ಬೀರೇಶ್ ಎಂಬುವವರು ಆತ್ಮಹತ್ಯೆ ಶರಣಾಗಿದ್ದಾರೆ. ಬೀರೇಶ್ಕಳೆದ ಕೆಲವು ವರ್ಷಗಳಿಂದ ಮೈಸೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೀರೇಶ್ ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಿದ್ದರು ಎನ್ನಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಇನ್ಸೆಕ್ಟರ್ ರವೀಂದ್ರ, ಪಿಎಸ್‌ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಮತ್ತು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ
- Advertisement -

