- Advertisement -
ಬಹಳ ದಿನಗಳಿಂದ ಕಾಯುತ್ತಿದ್ದ ಸಿಲಿಕಾನ್ ಸಿಟಿ ಜನರಿಗೆ ಕೊನೆಗೂ ಗುಡ್ನ್ಯೂಸ್ ಸಿಕ್ಕಿದೆ. ಇಷ್ಟು ದಿನ ನಮ್ಮ ಮೆಟ್ರೋ ಪ್ರಯಾಣಿಕರು ಯಾವಾಗ ಯೆಲ್ಲೂ ಲೈನ್ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿದ್ದರು. ಇದಕ್ಕೆ ಇಂದು ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದೇ ಆಗಸ್ಟ್ 10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಮಾಹಿತಿ ನೀಡಿದ್ದಾರೆ.
ಯೆಲ್ಲೋ ಲೈನ್ ಆರಂಭದ ಬಗ್ಗೆ ಖಚಿತಪಡಿಸಿ ಟ್ವೀಟ್ ಮಾಡಿರುವ ಸಂಸದರು, ಆಗಸ್ಟ್ 10ಕ್ಕೆ ಹಳದಿ ಮಾರ್ಗ ಅಧಿಕೃತವಾಗಿ ಆರಂಭ ಆಗಲಿದೆ. ಕೇಂದ್ರದಿಂದ ಹಳದಿ ಮಾರ್ಗ ಆರಂಭದ ಬಗ್ಗೆ ಘೋಷಣೆ ಮಾಡಲಾಗಿದೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ಯೆಲ್ಲೋ ಲೈನ್ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಜೊತೆಗೆ ಮೆಟ್ರೋ 3ನೇ ಹಂತದ ಕಾಮಗಾರಿ ಆರಂಭಕ್ಕೂ ಅಡಿಪಾಯ ಹಾಕಲಿದ್ದಾರೆ. ಯೆಲ್ಲೋ ಲೈನ್ ಪ್ರಿಯರ ಪರವಾಗಿ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
ಆರ್ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗ ಸುಮಾರು 19.5 ಕಿ.ಮೀ ಇದ್ದು, ಸಂಚಾರ ಮುಕ್ತಕ್ಕೆ ಸಿದ್ಧವಾಗಿದೆ. ಈ ಮಾರ್ಗ ಆರ್ವಿ ರಸ್ತೆಯಿಂದ ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸಲಿದೆ. ಪ್ರತಿದಿನ ಸುಮಾರು 25,000 ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆ ಇದೆ. ರೈಲುಗಳು 20 ರಿಂದ 30 ನಿಮಿಷಗಳ ಅಂತರದಲ್ಲಿ ಸಂಚರಿಸುವ ಸಾಧ್ಯತೆ ಇದೆ.
ಎಲೆಕ್ಟ್ರಾನಿಕ್ ಸಿಟಿ ಮಾರ್ಗದ ಸುರಕ್ಷತಾ ತಪಾಸಣೆ ಯಶಸ್ವಿಯಾಗಿದೆ. ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ಸುರಕ್ಷತಾ ತಪಾಸಣೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಕೆ ಮಾಡಿದ್ದರು. ವರದಿಯಲ್ಲಿ ಕೆಲವು ಸಣ್ಣಪುಟ್ಟ ಷರತ್ತುಗಳನ್ನು ವಿಧಿಸಿದ್ದಾರೆ. ಅದನ್ನು ಕೆಲವೇ ದಿನಗಳಲ್ಲಿ ಸರಿಪಡಿಸುವುದಾಗಿ BMRCL ಭರವಸೆ ನೀಡಿದೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ
- Advertisement -