ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಆಗುತ್ತಿರುವ ಕೊರೊನಾ ಸಾವಿಗಿಂತ ಕರ್ನಾಟಕದಲ್ಲಿ ಮರಣ ಪ್ರಮಾಣ ಕಡಿಮೆ ಇದೆ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರೆ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತೀ ದಶಲಕ್ಷ ಜನಸಂಖ್ಯೆಗೆ ಕೋವಿಡ್ ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ 5 ಪಟ್ಟು ಮತ್ತು ಮಹಾರಾಷ್ಟ್ರದಲ್ಲಿ 3 ಪಟ್ಟು ಹೆಚ್ಚಿದೆ. ಬೆಂಗಳೂರಿನಲ್ಲಿ ಮರಣ ಪ್ರಮಾಣವು ಇತರೆ ಮಹಾನಗರಗಳಿಗಿಂತ ಕಡಿಮೆ ಇದೆ ಎಂದಿದ್ದಾರೆ.
ಇನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಂದೆಯ ಶವ ತೆಗೆದುಕೊಳ್ಳಲು ಮಗಳು ಪಟ್ಟ ಕಷ್ಟದ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ತಕ್ಕ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹವನ್ನು ತೆರವುಗೊಳಿಸಲು ವಿಳಂಬ ಮಾಡಿರುವ ಘಟನೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಕ್ಜನೆ ನೀಡಿದ್ದೇನೆ. ಈ ರೀತಿ ನಿರ್ಲಕ್ಷ್ಯ ತೋರುವ ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿವುದು.
