Saturday, August 9, 2025

Latest Posts

ಸರ್ಕಾರದ ವಿರುದ್ಧ ಕಹಳೆ ಆಶಾ ಕಾರ್ಯಕರ್ತೆಯರು ಸಜ್ಜು!

- Advertisement -

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ‘ಮಾತುಕೊಟ್ಟಂತೆ ನಡೆದುಕೊಳ್ಳಬೇಕು’ ಎಂದು ಆಗ್ರಹಿಸಿ, ಆಗಸ್ಟ್ 12ರಿಂದ 14ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು, ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಹೇಳಿದ್ದಾರೆ.

ಆಗಸ್ಟ್ 12ರಿಂದ 14ರವರೆಗೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ತಿಂಗಳುಗಳ ಹಿಂದೆ ಘೋಷಿಸಿದಂತೆ ರಾಜ್ಯದ ಗೌರವಧನ ಮತ್ತು ಕೇಂದ್ರದ ಪ್ರೋತ್ಸಾಹ ಧನ ಸೇರಿ ಮಾಸಿಕ ಕನಿಷ್ಠ ₹10,000 ನೀಡಬೇಕು. ಈ ಆದೇಶವನ್ನು ಕಳೆದ ಏಪ್ರಿಲ್‌ ತಿಂಗಳಿನಿಂದ ಜಾರಿಗೊಳಿಸಬೇಕು ಅಂತ ಆಗ್ರಹಿಸಿದ್ದಾರೆ.

ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ, ₹1,000 ಪ್ರೋತ್ಸಾಹ ಧನ ಹೆಚ್ಚಿಸಲಾಗಿದೆ. ಹಾಗೆಯೇ ನಮ್ಮ ಆಶಾ ಕಾರ್ಯಕರ್ತೆಯರಿಗೂ ಕೂಡಾ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು.
ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯ ಅವೈಜ್ಞಾನಿಕ ಮೌಲ್ಯಮಾಪನ ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು, ನಗರ ಆಶಾಗಳಿಗೆ ₹2ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಅನೇಕ ಊರುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಸುಗಮಕಾರರಿಗೆ ಸೂಕ್ತ ವೇತನ ನೀಡಬೇಕು. ಕೇಂದ್ರ ಸರ್ಕಾರವು 2025ರ ಜೂನ್, ಜುಲೈನಲ್ಲಿ ಘೋಷಿಸಿರುವ ಪ್ರೋತ್ಸಾಹ ಧನವನ್ನು ಕೂಡಾ ರಾಜ್ಯದಲ್ಲಿ ಕೂಡಲೇ ಜಾರಿಗೆ ತರಬೇಕು. ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು, ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಆಗ್ರಹಿಸಿದರು.

- Advertisement -

Latest Posts

Don't Miss