Saturday, August 9, 2025

Latest Posts

ಹಾಸನ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ!!

- Advertisement -

ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಮತ್ತು ನಾಗರಿಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಆಗಸ್ಟ್ 14 ಮತ್ತು 15ರಂದು ಹೋರಾಟದ ಕಠಿಣ ಹಂತವನ್ನು ಘೋಷಣೆ ಮಾಡಲಾಗಿದೆ.

ನಗರದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭಗೊಳ್ಳಬೇಕು ಎಂಬುದಾಗಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟ, ಮಹಿಳಾ ಪರ ಸಂಘಟನೆಗಳು ಮತ್ತು ಕಾರ್ಯಕರ್ತೆಯರ ನಿಯೋಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಇಷ್ಟು ದೊಡ್ಡ ಆಸ್ಪತ್ರೆ ನಿರ್ಮಾಣವಾಗಿದ್ರೂ, ಇದನ್ನು ಕಾರ್ಯರೂಪಕ್ಕೆ ತರುವಲ್ಲಿ ಸರ್ಕಾರ ವಿಫಲವಾಗಿದೆ. ನಾವೆಲ್ಲಾ ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ ತಕ್ಕಂತೆ ಸಬಲೀಕರಿಸಬೇಕೆಂದು ಒತ್ತಾಯಿಸುತ್ತಿದರು.

ಇವತ್ತಿನ ಹೋರಾಟ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿದೆ. ಇದು ಆರಂಭ ಮಾತ್ರ. ಆಗಸ್ಟ್ 14ರಂದು ಜಿಲ್ಲೆಯ ಜನರಿಂದ ಜನಾರೋಗ್ಯ ಹಕ್ಕೊತ್ತಾಯವನ್ನು ಸಲ್ಲಿಸಲಾಗುವುದು. ಆಗಸ್ಟ್ 15ರಂದು ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಯಲಿದೆ. ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಮತ್ತು ಜಿಲ್ಲಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss