Hubli News: ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಗ್ರಾಮ ವಿಕಾಸ ಸೊಸೈಟಿ ಅನುಷ್ಠಾನಗೊಳಿಸುತ್ತಿರುವ ಉಚಿತ ವೃತ್ತಿಪರ ತರಬೇತಿ ಮೂಲಕ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಏರ್ಪಡಿಸಿರುವ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿ, ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.

ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 378 ಜನರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಮಯದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಪಾಲಿಕೆ ಮೇಯರ್, ಉಪ ಮೇಯರ್, ಪಕ್ಷದ ಮುಖಂಡರು ಭಾಗವಹಿಸಿದ್ದರು.

ಟಾಟಾ ಸ್ಟೀಲ್, ಜೆ.ಎಸ್.ಡಬ್ಲೂ ಫೌಂಡೇಶನ್, ಜೆಕೆ ಸಿಮೆಂಟ್, ರಾಮ್ಕೋ ಸಿಮೆಂಟ್, ಓರಿಯಂಟ್ ಸಿಮೆಂಟ್, ಮೈ ಹೋಮ್ ಗ್ರೂಪ್ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರಾಯೋಜಿತದಲ್ಲಿ ಸುಮಾರು 378 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲಾಯಿತು.

ಧಾರವಾಡ ಲೋಕಸಭಾ ಕ್ಷೇತ್ರದ 14 ಊರಿನ 378 ಅರ್ಹ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಹ್ಲಾದ ಜೋಶಿ ಮನವಿ ಮಾಡಿದರು. ಹುಬ್ಬಳ್ಳಿ: ಗ್ರಾಮ ವಿಕಾಸ ಸೊಸೈಟಿ ಅನುಷ್ಠಾನಗೊಳಿಸುತ್ತಿರುವ ಉಚಿತ ವೃತ್ತಿಪರ ತರಬೇತಿ ಮೂಲಕ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಏರ್ಪಡಿಸಿರುವ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿ, ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.

ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 378 ಜನರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಮಯದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಪಾಲಿಕೆ ಮೇಯರ್, ಉಪ ಮೇಯರ್, ಪಕ್ಷದ ಮುಖಂಡರು ಭಾಗವಹಿಸಿದ್ದರು.

ಟಾಟಾ ಸ್ಟೀಲ್, ಜೆ.ಎಸ್.ಡಬ್ಲೂ ಫೌಂಡೇಶನ್, ಜೆಕೆ ಸಿಮೆಂಟ್, ರಾಮ್ಕೋ ಸಿಮೆಂಟ್, ಓರಿಯಂಟ್ ಸಿಮೆಂಟ್, ಮೈ ಹೋಮ್ ಗ್ರೂಪ್ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರಾಯೋಜಿತದಲ್ಲಿ ಸುಮಾರು 378 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲಾಯಿತು.

ಧಾರವಾಡ ಲೋಕಸಭಾ ಕ್ಷೇತ್ರದ 14 ಊರಿನ 378 ಅರ್ಹ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಹ್ಲಾದ ಜೋಶಿ ಮನವಿ ಮಾಡಿದರು.

About The Author