Thursday, October 16, 2025

Latest Posts

Bengaluru: ವಿಲ್ಸನ್ ಗಾರ್ಡನ್ ಸ್ಪೋಟ ಕೇಸ್: 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

- Advertisement -

Bengaluru: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸ್ಪೋಟವಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು, 8ರಿಂದ 10 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಮೃತ 10 ವರ್ಷದ ಬಾಲಕ ಮುಬಾರಕ್ ಮನೆಯವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್‌ ಸ್ಪೋಟಗೊಂಡು ಅವಘಡ ಸಂಭವಿಸಿದೆ ಎಂಬುದು ಪೊಲೀಸರು ಹಾಗೂ ಬಿಬಿಎಂಪಿಯವರ ಪ್ರಾಥಮಿಕ ವರದಿ. ಈ ದುರ್ಘಟನೆಯಲ್ಲಿ ಒಂದು ಸಾವಾಗಿದೆ, 9 ಜನರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ ಎಂದಿದ್ದಾರೆ.

ಮೃತ ಬಾಲಕನಿಗೆ ರೂ.5 ಲಕ್ಷ ಪರಿಹಾರ ನೀಡಲಾಗುವುದು ಹಾಗೂ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಘಟನೆಯಲ್ಲಿ ಹಾನಿಗೊಳಗಾದ ಮನೆಗಳನ್ನು ರಿಪೇರಿ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ. ಈಗ ಸ್ಥಳ ಪರಿಶೀಲನೆ ನಡೆಯುತ್ತಿದ್ದು, ನಂತರದಲ್ಲಿ ಘಟನೆಗೆ ನಿರ್ಧಿಷ್ಟ ಕಾರಣಗಳು ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss