Friday, August 29, 2025

Latest Posts

ರಾಜ್ಯದಲ್ಲಿ ಮಳೆ ಅಬ್ಬರ 5 ಜಿಲ್ಲೆಗೆ ಭಾರೀ ಅಲರ್ಟ್!

- Advertisement -

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ.

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ ನಿರೀಕ್ಷೆಯ ಹಿನ್ನೆಲೆ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಮುಂದಿನ 24 ಗಂಟೆಗಳವರೆಗೆ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ.

ಆಗಸ್ಟ್ 16 ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹಾಗೆಯೇ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಆಗಸ್ಟ್ 17 ರಂದು ಕರಾವಳಿ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಂಭವ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ – ಬೆಂಗಳೂರು ನಗರ/ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಉತ್ತರ ಕರ್ನಾಟಕದಲ್ಲಿ ಈ ಅನಿರೀಕ್ಷಿತ ಮಳೆಯಿಂದಾಗಿ ಹಲವೆಡೆ ಜನಜೀವನಕ್ಕೆ ಸಂಕಷ್ಟ ಎದುರಾಗಿದ್ದು, ಹವಾಮಾನ ಇಲಾಖೆಯು ರಾಜ್ಯದಾದ್ಯಂತ ನಾಗರಿಕರಿಗೆ ಜಾಗರೂಕರಾಗಿರಲು ಸೂಚನೆ ನೀಡಿದೆ. ಜೊತೆಗೆ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇರೋದಾಗಿ ಹವಾಮಾನ ಇಲಾಖೆ ಸೂಚಿಸಿದೆ.

- Advertisement -

Latest Posts

Don't Miss