Gokak News: ಗೋಕಾಕ್‌ನಲ್ಲಿ ಧಾರಾಕಾರ ಮಳೆಗೆ ಕುಸಿದ ಮನೆ, ಓರ್ವ ಮಹಿಳೆ ಸಾ*ವು

Gokak News: ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಮನೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಗೋಕಾಕದ ಸಂಗಮ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಮನೆ ಮಳೆಗೆ ಬಿದ್ದು ಹೋಗಿ, ಮನೆಲ್ಲಿದ್ದ 50 ವರ್ಷದ ಪರೀದಾಬಾನು ಶಕೀಲಹ್ಮದ ಕನವಾಡ ಎಂಬ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಗಂಭೀರವಾಗಿ ಗಾಯಗ“ಂಡವರನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗೋಕಾಕ್ ತಹಶೀಲ್ದಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

About The Author