ಜೆಡಿಎಸ್ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ಎಚ್.ಡಿ ಕೋಟೆ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್ ಮುಖಂಡ ಕೆ.ಎಂ. ಕೃಷ್ಣ ನಾಯಕ ತಿಳಿಸಿದ್ದಾರೆ.
ಎಚ್.ಡಿ.ಕೋಟೆಯ ಜೆಡಿಎಸ್ ಕಚೇರಿಗೆ ಕೆ.ಎಂ.ಕೃಷ್ಣ ನಾಯಕರನ್ನು ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ ಬರಮಾಡಿಕೊಂಡರು. ನಂತರ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಪಕ್ಷದ ಶಾಸಕರು ಇಲ್ಲದೆ ಕಾರ್ಯಕರ್ತರು ಅನುಭವಿಸಿದ ನೋವನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಾಸಕರನ್ನು ಆಯ್ಕೆ ಮಾಡುವಲ್ಲಿ ಕಾರ್ಯಕರ್ತರು ಶ್ರಮವಹಿಬೇಕು ಎಂದು ಕರೆ ಕೊಟ್ಟರು.
ಮುಂದಿನ ಎರಡು ಮೂರು ತಿಂಗಳಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮಲಿರುವ ಅಸಮಾಧಾನ ಮರೆತು ಪಕ್ಷದ ಅಭ್ಯರ್ಥಿಗಳು ಆಯ್ಕೆ ಆಗುವಂತೆ ಶ್ರಮವಹಿಸಬೇಕು. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಆಗಬೇಕು ಎಂದು ತಿಳಿಸಿದರು.
ತಾಲೂಕು ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ, ದುರಾಡಳಿತ, ಹಗರಣಗಳಲ್ಲಿ ರಾಜ್ಯ ಸರ್ಕಾರ ತೊಡಗಿದೆ, ರಾಜ್ಯದ ಅಭಿವೃದ್ಧಿಗೆ ಹಣಕಾಸಿನ ಕೊರತೆ ಯಾಗಿದ್ದು ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿದರು. ತಾಲೂಕಿನಲ್ಲಿ ಮಾಜಿ ಶಾಸಕರು ಸೇರಿದಂತೆ ಎಲ್ಲ ಮುಖಂಡರನ್ನು ಮುಂದಿನ ದಿನಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ದುಡಿಯುತ್ತೇನೆ ಸೆಪ್ಟೆಂಬರ್ ಎರಡನೇ ವಾರದಲ್ಲಿ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಮಿಸ ಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಿ ಕಾರ್ಯಕ್ರಮ ನಡೆಸಲಾಗುವುದು ಎಂದರು. ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ನೂರಾರು ಮುಖಂಡರು ಜೆಡಿಎಸ್ ಪಕ್ಷ ಸೇರಿದರು ಎಂದು ಜೆಡಿಎಸ್ ಮುಖಂಡ ಕೆ ಎಂ ಕೃಷ್ಣ ನಾಯಕ ಹೇಳಿದ್ದಾರೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ