Dharwad News: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳ ಅರೆಸ್ಟ್

Dharwad News: ಧಾರವಾಡ: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಗಷ್ಟ್‌ 17 ರಂದು ಧಾರವಾಡ ಹಿರೇಮಠ ಓಣಿಯ ಸಾಂಬ್ಳೆ ಬಿಲ್ಡಿಂಗ್‌ನಲ್ಲಿ ವಾಸವಿದ್ದ ವಿಜಯ ಕೋಟಕರ್ ಎಂಬುವವರ ಮನೆಯಲ್ಲಿದ್ದ ಮಂಗಳಸೂತ್ರ ಕಳ್ಳತನವಾಗಿತ್ತು. ಈ ಸಂಬಂಧ ಅವರು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ವಿದ್ಯಾಗಿರಿ ಠಾಣೆ ಪೊಲೀಸರು ಘಟನೆ ನಡೆದ ಕೆಲವೇ ದಿನಗಳಲ್ಲಿ ಆರೋಪಿತನನ್ನು ಬಂಧಿಸಿ ಆತನಿಂದ ಚಿನ್ನದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ.

ಧಾರವಾಡದ ಜನ್ನತನಗರ ನಿವಾಸಿ ಬಾಬಾಜಾನ್ ಸಂಶಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನಿಂದ ಮಾಂಗಲ್ಯ ಸರ ವಶಪಡಿಸಿಕೊಳ್ಳಲಾಗಿದೆ.

About The Author