Friday, August 29, 2025

Latest Posts

ಮುಂದಿನ ದಿನಗಳಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಎಚ್ಚರಿಕೆ!

- Advertisement -

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆ 9 ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೊಂದಿಗೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ರಾಜ್ಯದ ಇತರೆ ಹಲವು ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್ 26ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಆದರೆ, ಆಗಸ್ಟ್ 27ರಿಂದ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಕೆಲವೊಂದು ಆಯ್ದ ಪ್ರದೇಶಗಳಲ್ಲಿ ಮಾತ್ರ ಸಾಧಾರಣ ಮಳೆ ಕಂಡುಬರಬಹುದು ಎಂದು ಇಲಾಖೆಯು ಮುಂಚಿತವಾಗಿ ಆಗಸ್ಟ್ 23 ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯ ಪ್ರಮಾಣ ಇದೀಗ ಸ್ವಲ್ಪ ಕುಂಠಿತವಾಗಿದೆ. ಆದರೆ, ಉಜನಿ ಜಲಾಶಯದಿಂದ ಭೀಮಾ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಆಗಸ್ಟ್ 22 ರಂದು , ಈ ನೀರು ಕಲಬುರಗಿಗೆ ತಲುಪಿದ್ದು, ಜಿಲ್ಲೆಯ ದೇವಾಲಯಕ್ಕೆ ಹೋಗುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಸೇತುವೆ ಮೇಲೆ ಸುಮಾರು 10ರಿಂದ 12 ಅಡಿ ಎತ್ತರದ ನೀರು ಹರಿಯುತ್ತಿದೆ. ದೇವಾಲಯದ ಭಾಗವೂ ನೀರಿನಲ್ಲಿ ಮುಳುಗಿದ್ದು, ಜನರಿಗೆ ಪ್ರವೇಶ ಸಾಧ್ಯವಾಗದ ಸ್ಥಿತಿ ಉಂಟಾಗಿದೆ.

- Advertisement -

Latest Posts

Don't Miss