Friday, August 29, 2025

Latest Posts

ಆಗಸ್ಟ್‌ 27ರಿಂದ ಮತ್ತೆ ಭಾರೀ ಮಳೆ ಅಲರ್ಟ್

- Advertisement -

ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಒಂದೆರಡು ದಿನ ಬಹುತೇಕ ಜಿಲ್ಲೆಗಳಲ್ಲಿ, ಒಣ ಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಆಗಸ್ಟ್‌ 27ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಚುರುಕುಗೊಳ್ಳಲಿದೆಯಂತೆ.

ಗಾಳಿಯ ವೇಗ ಗಂಟೆಗೆ 40ರಿಂದ 50 ಕಿಲೋ ಮೀಟರ್‌ ವೇಗದಲ್ಲಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 28ರಿಂದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಶುರುವಾಗಲಿದೆ.

ಉಳಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಳ್ಳಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲ ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ.

ನೆರೆ ರಾಜ್ಯಗಳಲ್ಲಿ ಭಾರೀ ಮಳೆಯಾಗ್ತಿದ್ದು, ಉತ್ತರ ಕರ್ನಾಟಕದ ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ಜಲಾಶಯಗಳು ಭರ್ತಿಯಾಗಿದ್ದು, ಹೆಚ್ಚಿನ ನೀರನ್ನ ನದಿಗಳಿಗೆ ಹರಿಸಲಾಗ್ತಿದೆ. ಪರಿಣಾಮ, ನದಿ ತೀರದ ಗ್ರಾಮಗಳಲ್ಲಿ ನೆರೆ ಸೃಷ್ಟಿಯಾಗಿದೆ. ಹೆಕ್ಟೇರ್‌ಗಟ್ಟಲೇ ಕೃಷಿ ಭೂಮಿ ಜಲಾವೃತವಾಗಿವೆ. ಹಲವೆಡೆ ಮುಂಜಾಗ್ರತಾ ಕ್ರಮವಾಗಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ 2ರಿಂದ 3 ದಿನಗಳಲ್ಲಿ, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

Latest Posts

Don't Miss