ಆಗಸ್ಟ್ 10 ಅಂದ್ರೆ ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ಆಗಸ್ಟ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹರಿದಾಡಿದ್ದು, ಇದು ಸುಳ್ಳು ಎಂದು ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದು. ಇದೀಗ ವಿದ್ಯಾರ್ಥಿಗಳ ಗೊಂದಲ ದೂರವಾಗಿ ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.

ಮೊನ್ನೆ ತಾನೇ ಅಸಾವುದ್ದೀನ್ ಓವೈಸಿ ಬಾಬ್ರಿ ಮಸೀದಿ ಅಂದು ಇತ್ತು ಮುಂದು ಇರುವುದು ಎಂದು ಟ್ವೀಟ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತ ನವದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ. ಆದ್ರೆ ಮೋದಿ ಸರ್ಕಾರ ಮಾತ್ರ ನಾಪತ್ತೆ ಎಂದು ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೊರೊನಾ ಸೋಂಕಿತರ ಪ್ರಮಾಣದಲ್ಲಿ ವಿಶ್ವದಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ.
ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಮಾಧ್ಯಮದವರು ಕೇಳಿದ ಕೆಲ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣದ ಕಾರ್ಯಕ್ರಮಕ್ಕೆ ಕರೆದ್ರೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಯೋಗಿ, ಅವರು ನನ್ನನ್ನು ಕರೆಯೋದಿಲ್ಲಾ. ಹಾಗಾಗಿ ನಾನು ಹೋಗುವುದಿಲ್ಲ. ಸಿಎಂ ಆಗಿ ತಾರತಮ್ಯ ಮಾಡೋದಿಲ್ಲ ಎಂದು ಉತ್ತರಿಸಿದ್ದಾರೆ.
ಜಮ್ಮುಕಾಶ್ಮೀರದ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಿ.ಎಸ್.ಮುರ್ಮು ಈಗ ಭಾರತದ 14ನೇ ಸಿಎಜಿಯಾಗಿ ನೇಮಕವಾಗಿದ್ದಾರೆ. 1985ರ ಬ್ಯಾಚ್‌ನ ಗುಜರಾತ್ ಕೆಡರ್ IAS ಅಧಿಕಾರಿ ಗಿರೀಶ್ ಚಂದ್ರ ಇದೀಗ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.