Thursday, August 28, 2025

Latest Posts

ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ: ಡಿಸಿಎಂ ಡಿಕೆಶಿ

- Advertisement -

Political News: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದು, ಈ ಬಗ್ಗೆ ತೀವ್ರ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಬಿಜೆಪಿಯ ಹಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಿಜೆಪಿ ಸಂಸದ ಮತ್ತು ಮೈಸೂರು ಮಹಾರಾಜರಾಗಿರುವ ಯದುವೀರ್ ಅವರು ಬಾನು ಅವರು ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ಬಗ್ಗೆ ಹೇಳಿಕೆ ನೀಡಿದ್ದು, ಆ ಬಗ್ಗೆ ಕ್ಲಾರಿಟಿ ನೀಡಲಿ ಎಂದಿದ್ದರು.

ಈ ಮಾತಿಗೆ ಇದೀಗ ಪ್ರತಿಕ್ರಿಯಿಸಿರುವ ಡಿಕೆಶಿ, ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ ಎಂದಿದ್ದಾರೆ. ನಮ್ಮ ನಾಡ ಹಬ್ಬ – ದಸರಾ ನಮ್ಮ ನಾಡ ದೇವತೆ – ಚಾಮುಂಡೇಶ್ವರಿ ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಎಂದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ. ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ! ಎಂದು ಡಿಕೆಶಿ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

- Advertisement -

Latest Posts

Don't Miss