ದಸರಾ ಡ್ರೋನ್‌ ಶೋ ಡೇಟ್‌ ಫಿಕ್ಸ್! ಲೈಟಿಂಗ್ಸ್‌ ಭರ್ಜರಿ ತಯಾರಿ

ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆಪ್ಟೆಂಬರ್‌ 28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಲಾಗಿದೆ. ಅಕ್ಟೋಬರ್‌ 1 ಮತ್ತು 2ರಂದು ಡ್ರೋನ್‌ ಶೋ ಪ್ರಮುಖವಾಗಿದೆ. ಡ್ರೋನ್‌ಶೋನಲ್ಲಿ ಖ್ಯಾತ ಗಾಯಕರಿಂದ ಸಂಗೀತ ಸಂಜೆ ಹಮ್ಮಿಕೊಳ್ಳುವುದಕ್ಕೂ ಚಿಂತನೆ ನಡೆಸಲಾಗಿದೆ.

ವಿಜಯನಗರ ಎರಡನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರರಿ ಜಿ. ಲಕ್ಷ್ಮಿಕಾಂತರೆಡ್ಡಿ ಸಮಯ ನಿದಿಪಡಿಸಿದರು. ವಿದ್ಯುತ್‌ ದೀಪಾಲಂಕಾರ ಹಾಗೂ ಡ್ರೋನ್‌ ಶೋ ಯಶಸ್ಸಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಈ ಬಾರಿ ಏರ್‌ ಶೋ ಕೂಡ ನಡೆಯಲಿದೆ. ಇದರ ನಡುವೆ ಡ್ರೋನ್‌ ಶೋ ಹಮ್ಮಿಕೊಳ್ಲಬೇಕೆದೆ. ಅಲ್ಲದೆ, ಪಂಜಿನ ಕವಾಯತು ತಾಲೀಮು ಸಹ ಇರುವುದರಿಂದ ಯಾವುದೇ ಅಡಚಣೆ ಆಗದಂತೆ ನೋಡಿಕೊಳ್ಳಬೇಕಾಗಿದೆ ಎಂದು ಸೂಚಿಸಿದರು.

ಡ್ರೋನ್‌ ಶೋ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯನ್ನು MDA ನಿಂದ ಮಾಡಿಕೊಳ್ಳಬೇಕು. ಸಂಗೀತ ಸಂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಸಿದ್ದತೆ ಕೈಗೊಳ್ಳಬೇಕು ಎಂದು ತಿಳಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು, ನಗರದ ಪ್ರಮುಕ ವೃತ್ತ, ರಸ್ತೆಗಳು ಹಾಗೂ ಇನ್ನಿತರ ಸ್ಥಳಗಳಿಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ತಿಳಿಸಿದರು.

 

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author