Monday, October 6, 2025

Latest Posts

ಕಲಘಟಗಿ: ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಸಂತೋಷ್‌ ಲಾಡ್‌

- Advertisement -

Dharwad News: ಧಾರವಾಡ : ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಬಹು ಜನೋಪಯೋಗಿ ಕಾರ್ಯಕ್ರಮವಾಗಿರುವ ಇಂದಿರಾ ಕ್ಯಾಂಟಿನ್ ನಿರ್ಮಾಣ ಮತ್ತು ನಿರ್ವಹಣೆಗೆ ಕಲಘಟಗಿ ಪಟ್ಟಣದ ಸೂಕ್ತ ಸ್ಥಳದಲ್ಲಿ ಆಯ್ಕೆ ಮಾಡಲಾಗಿದ್ದು, ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ರುಚಿಕರವಾದ ವಿವಿಧ ರೀತಿಯ ಉಪಹಾರ, ಊಟ ದೊರಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಹೇಳಿದರು.

ಕಲಘಟಗಿ ಪಟ್ಟಣ ಪಂಚಾಯತದಿಂದ ಆರಂಭಿಸಿರುವ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿ, ಮಾತನಾಡಿದರು.

ಇಂದಿರಾ ಕ್ಯಾಂಟಿನ್‍ವು ರೂ. 43.67 ಲಕ್ಷಗಳ ವೆಚ್ಚದಲ್ಲಿ ಅಡುಗೆ ಸಾಮಗ್ರಿಗಳನ್ನು ಖರೀದಿಸಿದೆ. ಕಟ್ಟಡದ ಆವರಣಕ್ಕೆ ಕಂಪೌಂಡ್ ಗೋಡೆ ನಿರ್ಮಾಣ ಹಾಗೂ ಫೆವರ್ಸ್ ಅಳವಡಿಸಲು ಕಲಘಟಗಿ ಪಟ್ಟಣ ಪಂಚಾಯತಿಯ ಎಸ್‍ಎಫ್‍ಸಿ ಅನುದಾನ ರೂ. 12.12 ಲಕ್ಷಗಳನ್ನು ವಿನಿಯೋಗಿಸಲಾಗಿದೆ ಎಂದು ಸಚಿವರು ಹೇಳಿದರು.

ಒಟ್ಟಾರೆ ರೂ. 142.79 ಲಕ್ಷಗಳ ವೆಚ್ಚದಲ್ಲಿ ಸುಂದರ ವಾತಾವರಣದಲ್ಲಿ ಇಂದಿರಾ ಕ್ಯಾಂಟೀನ್ ಬಡವರ ಸೇವೆಗೆ ಸಜ್ಜಾಗಿ ನಿಂತಿದೆ. ಬಡವರು, ಕೂಲಿ ಕಾರ್ಮಿಕರು, ಗ್ರಾಮೀಣ ಪ್ರದೇಶದಿಂದ ಶಿಕ್ಷಣಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಹಾಗೂ ಕಲಘಟಗಿ ಸುತ್ತಮುತ್ತಲಿನ ಗ್ರಾಮಗಳಿಂದ ಬರುವ ಸಾರ್ವಜನಿಕರಿಗೆ ಅದರಲ್ಲಿ ಮುಖ್ಯವಾಗಿ ವಿವಿಧ ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಆಗಮಿಸುವ ರೈತರಿಗೆ ಹಾಗೂ ಸಾರ್ವಜನಿಕರಿಗೆ ಹಸಿವು ನೀಗಿಸುವ ಕೆಲಸವನ್ನು ಇಂದಿರಾ ಕ್ಯಾಂಟಿನ್ ಆರಂಭಿಸುವ ಮೂಲಕ ಮಾಡಲಾಗಿದೆ ಎಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.

- Advertisement -

Latest Posts

Don't Miss