ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್ ನಿಂದ ವೇತನ ಸಿಗದೇ ದೈನಂದಿನ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ. ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರಕ್ಕೆ ಸಿಲುಕಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು ಎಂದಿದ್ದಾರೆ.
ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು ಎಂದು ಹೆಚ್ಡಿಕೆ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.



