‘ಈ ಮನೆಹಾಳು ನಿರ್ಧಾರವನ್ನು ಹಿಂಪಡೆಯದಿದ್ದಲ್ಲಿ ಹೋರಾಟ ಅನಿವಾರ್ಯ’

ಆನ್‌ಲೈನ್ ಮದ್ಯಮಾರಾಟದ ಬಗ್ಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ ‘ಮನೆ ಬಾಗಿಲಿಗೆ ಮದ್ಯ’ ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ ಎಂದಿದ್ದಾರೆ.

ಈ ಸಂಬಂಧ ಖಾಸಗಿ ಕಂಪನಿ ಜೊತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಹೆಚ್ಡಿಕೆ ಸ್ಪಷ್ಟನೆ ನೀಡಿದ್ದಾರೆ.

ಕೊರೋನಾ ವೈರಸ್ ನಂತರ ಎದುರಾದ ಲಾಕ್ ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ ಎಂಬಂತೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯುವ ಇಲ್ಲ ಆನ್ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸಲ್ಲ ಎಂದು ಹೆಚ್ಡಿಕೆ ಹೇಳಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author