ಧರ್ಮಸ್ಥಳ ಪ್ರಕರಣ ಕೊನೆಗೂ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು, ಬಿಜೆಪಿಗರು ಒತ್ತಾಯಿಸುತ್ತಲೇ ಬಂದಿದ್ರು. ಎರಡ್ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಲು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ರು. ಅಷ್ಟರಲ್ಲೇ ಅಮಿತ್ ಶಾರನ್ನು ಕರ್ನಾಟಕದ 8 ಸ್ವಾಮೀಜಿಗಳ ನಿಯೋಗ ಭೇಟಿಯಾಗಿದೆ.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ, ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದೆ. ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿದ್ದಾರೆ. ಸ್ವಾಮೀಜಿಗಳು, ಧರ್ಮಸ್ಥಳ ಪ್ರಕರಣ ಕುರಿತು ಗೃಹ ಸಚಿವರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದ್ರು. ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಅಮಿತ್ ಶಾ ಅವರಿಗೆ ಮಾಹಿತಿ ನೀಡಿದ್ದಾರೆ.
ಸ್ವಾಮೀಜಿಗಳ ನಿಯೋಗದ ಮನವಿಗೆ, ಅಮಿತ್ ಶಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು, ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಗೊಳಿಸಿ ಅಂತಾ, ಸ್ವಾಮೀಜಿಗಳಿಗೆ ಅಮಿತ್ ಶಾ ಹೇಳಿದ್ದಾರಂತೆ. ಸುಮಾರು ಒಂದೂವರೆ ಗಂಟೆಗಳ ಕಾಲ ಈ ಮಹತ್ವದ ಚರ್ಚೆ ನಡೆಸಲಾಗಿದೆ.